ವಿಮಾನಯಾನಕ್ಕೆ ₹47 ಕೋಟಿಗೂ ಅಧಿಕ ಖರ್ಚು ಮಾಡಿದ ಸ‘ಮಜಾ’ವಾದಿ ಸಿಎಂ ಸಿದ್ದರಾಮಯ್ಯ..!

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪ್ರವಾಸಕ್ಕೆ ಹೆಲಿಕಾಪ್ಟರ್​ ಅಥವಾ ವಿಮಾನಗಳನ್ನು ಬಳಕೆ ಮಾಡುವುದು ಸರ್ವೇಸಾಮಾನ್ಯ. ಆದರೆ 2023ರಿಂದ ಇಲ್ಲಿಯವರೆಗೆ ವಿಮಾನಯಾನಕ್ಕೆ ಸಿಎಂ ಸಿದ್ದರಾಮಯ್ಯ ರಾಜ್ಯದ ಬೊಕ್ಕಸದಿಂದ ಖರ್ಚು ಮಾಡಿರುವ ಹಣದ ಬಗ್ಗೆ ಮಾಹಿತಿ ಬಿಡುಗಡೆಯಾಗಿದ್ದು ಎಲ್ಲರ ತಲೆತಿರುಗಿಸಿದೆ.
ವಿಧಾನಪರಿಷತ್​​ನಲ್ಲಿ ಬಿಜೆಪಿ ಸದಸ್ಯ ರವಿಕುಮಾರ್, ಸಿಎಂ ಸಿದ್ದರಾಮಯ್ಯ ಅವರ ವಿಮಾನಯಾನದ ಖರ್ಚಿನ ಕುರಿತಂತೆ ಚುಕ್ಕಿ ರಹಿತ ಪ್ರಶ್ನೆ ಕೇಳಿದ್ದರು. ಇದಕ್ಕೆ ಸದನದಲ್ಲೇ ಉತ್ತರ ನೀಡಿದ ಸರ್ಕಾರವು ಸಿಎಂ ಸಿದ್ದರಾಮಯ್ಯ ಈವರೆಗೆ ಬರೋಬ್ಬರಿ 47 ಕೋಟಿ, 38 ಲಕ್ಷ, 24 ಸಾವಿರದ 347 ರೂಪಾಯಿ ವಿಮಾನಯಾನಕ್ಕೆ ಖರ್ಚು ಮಾಡಿದ್ದಾರೆ ಎನ್ನಲಾಗಿದೆ.
ಹಣಕಾಸು ಖಾತೆಯ ಜವಾಬ್ದಾರಿ ತಾವೇ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿಧಾನಪರಿಷತ್​​ನಲ್ಲಿ ರವಿಕುಮಾರ್​ ಪ್ರಶ್ನೆಗೆ ತಾವೇ ಉತ್ತರ ನೀಡಿದ್ದಾರೆ. ಈ ಮೂಲಕ ತಮ್ಮ ಎರಡೂವರೆ ವರ್ಷಗಳ ಆಡಳಿತ ಅವಧಿಯಲ್ಲಿ ವಿಮಾನಯಾನಕ್ಕೆ ಭರ್ಜರಿ ಖರ್ಚು ಮಾಡಿರುವ ವಿಚಾರವನ್ನು ಸ್ವತಃ ತಾವೇ ಬಹಿರಂಗಗೊಳಿಸಿದ್ದಾರೆ.

ಇದನ್ನೂ ಓದಿ: ರಾಜಭವನಕ್ಕೆ ಲೋಕಭವನವೆಂದು ಮರುನಾಮಕರಣ : ಕೇಂದ್ರದ ನಡೆಗೆ ರಾಜ್ಯ ಸರ್ಕಾರದಿಂದ ಆಕ್ಷೇಪ

ರಾಜ್ಯದ ಬಹುತೇಕ ಪ್ರವಾಸಗಳಿಗೆ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್, ವಿಶೇಷ ವಿಮಾನ ಬಳಕೆ ಮಾಡಿದ್ದಾರೆ. ದೆಹಲಿ, ಹೈದ್ರಾಬಾದ್, ಚೆನ್ನೈ ಸೇರಿದಂತೆ ವಿವಿಧೆಡೆ ಸಿಎಂ ವಿಮಾನ ಹಾಗೂ ಹೆಲಿಕಾಪ್ಟರ್​ಗಳ ಮೂಲಕವೇ ಓಡಾಟ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಬೊಕ್ಕಸದಿಂದ 47 ಕೋಟಿ ರೂಪಾಯಿ ಖರ್ಚು ಆಗಿದೆ. ಅದರಲ್ಲೂ 5 ಕೋಟಿಗೂ ಹೆಚ್ಚು ಹಣವನ್ನು ಮೈಸೂರು ಪ್ರವಾಸಕ್ಕೆ ಸಿಎಂ ಬಳಕೆ ಮಾಡಿದ್ದಾರೆ ಎಂದು ಸರ್ಕಾರ ವರದಿ ನೀಡಿದೆ

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories