ಅಂಡರ್-19 ವಿಶ್ವಕಪ್ : ವೈಭವ್ ಸೂರ್ಯವಂಶಿ ಐತಿಹಾಸಿಕ ವಿಶ್ವದಾಖಲೆ ಶತಕ
ದುಬೈ : Under 19 World Cup: ಭಾರತದ ಉದಯೋನ್ಮುಖ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರು ಅಂಡರ್-19 ಕ್ರಿಕೆಟ್ನಲ್ಲಿ ಐತಿಹಾಸಿನ ವಿಶ್ವದಾಖಲೆ ಬರೆದಿದ್ದಾರೆ. ಅಂಡರ್ 19 ವಿಶ್ವಕಪ್ನಲ್ಲಿ ಸ್ಪೋಟಕ ಶತಕ ಸಿಡಿಸುವ ಮೂಲಕ ಕ್ರಿಕೆಟ್ ಜಗತ್ತು ನಿಬ್ಬೆರಗಾಗುವಂತೆ ಮಾಡಿದ್ದಾರೆ.
ಅಂಡರ್ -19 ಏಷ್ಯಾಕಪ್ ನ ಮೊದಲ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ದಾಖಲೆ ಬರೆದಿದ್ದಾರೆ. ಯುಎಇ (UAE) ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 95 ಎಸೆತಗಳಲ್ಲಿ ಸ್ಫೋಟಕ 171 ರನ್ ಬಾರಿಸಿದ್ದಾರೆ.
ಬರೋಬ್ಬರಿ 14 . ಈ ಮೂಲಕ, ಯೂತ್ ಏಕದಿನ (Youth ODI) ಕ್ರಿಕೆಟ್ ಇತಿಹಾಸದಲ್ಲಿ ಒಂದು ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವದಾಖಲೆಯನ್ನು ವೈಭವ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಇದಕ್ಕೂ ಮುನ್ನ, ಇಂಗ್ಲೆಂಡ್ ವಿರುದ್ಧ ಕೇವಲ 52 ಎಸೆತಗಳಲ್ಲಿ ಶತಕ ಸಿಡಿಸಿ ಯೂತ್ ಏಕದಿನ ಕ್ರಿಕೆಟ್ನಲ್ಲಿ ಅತಿ ವೇಗದ ಶತಕ ಬಾರಿಸಿದ ದಾಖಲೆಯನ್ನು ಸಹ ಅವರು ಹೊಂದಿದ್ದರು. ತಮ್ಮ 14ನೇ ವಯಸ್ಸಿನಲ್ಲಿ ಈ ದಾಖಲೆಗಳನ್ನು ಬರೆದಿರುವುದು ವಿಶೇಷ. ಈ ಮೂಲಕ ಭಾರತದ ಮುಂದಿನ ತಲೆಮಾರಿನ ಸ್ಟಾರ್ ಆಟಗಾರನಾಗಿ ವೈಭವ್ ಸೂರ್ಯವಂಶಿ ಹೊರಹೊಮ್ಮಿದ್ದಾರೆ.
Also Read: ದಕ್ಷಿಣ ಆಫ್ರಿಕಾ ವಿರುದ್ಧದದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು
ಯುಎಇ ವಿರುದ್ದದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕೆ ಇಳಿದಿದ್ದ ವೈಭವ್ ಸೂರ್ಯವಂಶಿ ಆರಂಭದಿಂದಲೇ ಸ್ಪೋಟಕ ಆಟಕ್ಕೆ ಮುಂದಾಗಿದ್ರು, ಕೇವಲ 95 ಎಸೆತಗಳಲ್ಲಿ 14 ಸಿಕ್ಸರ್ ಹಾಗೂ 9 ಬೌಂಡರಿಗಳ ನೆರವಿನೊಂದಿಗೆ ವೈಭವ್ ಸೂರ್ಯವಂಶಿ 171ರನ್ ಬಾರಿಸಿದ್ದಾರೆ.
ಭಾರತ ತಂಡದ ಆರೋನ್ ಜಾರ್ಜ್ 73 ಎಸೆತಗಳಲ್ಲಿ 69 ರನ್ ಸಿಡಿಸಿದ್ರೆ, ವಿಹಾನ್ ಮಲ್ಹೋತ್ರಾ 55 ಎಸೆತಗಳಲ್ಲಿ 69 ರನ್, ವೇದಾಂತ್ ತ್ರಿವೇದಿ 34 ಎಸೆತಗಳಲ್ಲಿ 38ರನ್ ಸಿಡಿಸುವ ಮೂಲಕ ಭಾರತ ತಂಡ 50 ಓವರ್ ಗಳಲ್ಲಿ 6 ವಿಕೆಟ್ ಗಳನ್ನು ಕಳೆದುಕೊಂಡು 433 ರನ್ ಬಾರಿಸಿದೆ.
ಈ ಮೂಲಕ ಯುಎಇ ಕ್ರಿಕೆಟ್ ತಂಡಕ್ಕೆ ಸವಾಲಿನ ಮೊತ್ತವನ್ನು ನೀಡಿದೆ. ಅಂಡರ್ 19 ಕ್ರಿಕೆಟ್ ನಲ್ಲಿ ಈಗಾಗಲೇ ವೈಭವ್ ಸೂರ್ಯವಂಶಿ ದಾಖಲೆಯ ಮೇಲೆ ದಾಖಲೆ ಬರೆಯುವ ಮೂಲಕ ಕ್ರಿಕೆಟ್ ವಲಯದಲ್ಲಿ ಸಂಚಲನವನ್ನೇ ಮೂಡಿಸಿದ್ದಾರೆ.



