ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

Shamanur Shivashankarappa Dies : ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದಲೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಶಾಮನೂರು ಶಿವಶಂಕರಪ್ಪ ಅವರು ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ.
1969 ರಲ್ಲಿ ದಾವಣಗೆರೆ ನಗರಪಾಲಿಕೆಯ ಸದಸ್ಯರಾಗಿ ಆಯ್ಕೆಯಾಗುವ ಶಾಮನೂರು ಶಿವಶಂಕರಪ್ಪ ಅವರು ರಾಜಕೀಯ ಜೀವನ ಆರಂಭಿಸಿದ್ದರು.1971 ರಲ್ಲಿ ದಾವಣಗೆರೆ ನಗರಪಾಲಿಕೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಒಟ್ಟು ಒಟ್ಟು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ
1994 ರಲ್ಲಿ ಮೊದಲ ಬಾರಿಗೆ ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2004, 2008, 2013, 2018, 2023ರಲ್ಲಿ ನಡೆದ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
1997 ರಲ್ಲಿ ಲೋಕಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. 2013 ರಿಂದ 2016 ರವರೆಗೆ ಕರ್ನಾಟಕ ರಾಜ್ಯದ ತೋಟಗಾರಿಕಾ ಮತ್ತು ಕೃಷಿ ಮಾರುಕಟ್ಟೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಮೂರು ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ (KPCC) ಖಜಾಂಚಿಯಾಗಿ ಕೆಲಸ ಮಾಡಿದ್ದಾರೆ.
ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿದ್ದಾರೆ. ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ (BIET) ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ಅವರು ಆರಂಭಿಸಿದ್ದಾರೆ. ಮಾತ್ರವಲ್ಲದೇ ಶಿಕ್ಷಣ, ಕೈಗಾರಿಕೋದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ಸಕ್ಕರೆ ಮತ್ತು ಡಿಸ್ಟಿಲರಿ ಉದ್ಯಮಗಳನ್ನು ನಡೆಸುವ ಶ್ಯಾಮನೂರ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಒಡೆತನವನ್ನು ಹೊಂದಿದ್ದಾರೆ. ತೋಟಗಾರಿಕಾ ಸಚಿವರಾಗಿದ್ದಾಗ ಇಲಾಖೆಯ ಚಟುವಟಿಕೆಗಳನ್ನು ಉತ್ತೇಜಿಸಲು 1,000 ಕೋಟಿ ರೂಪಾಯಿ ಯೋಜನೆಯನ್ನು ಆರಂಭಿಸಿದ್ದರು. 2016 ರಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಉತ್ತಮ ತೋಟಗಾರಿಕೆ ರಾಜ್ಯ ಪ್ರಶಸ್ತಿ ದೊರೆಕಿತ್ತು.
ದಾವಣಗೆರೆಯ ಕುಂದುವಾಡ ಕೆರೆಯನ್ನು ಪುನಃಸ್ಥಾಪಿಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿದ್ದರು. ಅಲ್ಲದೇ ದಾವಣಗೆರೆಯಲ್ಲಿ ನಿರ್ಮಿಸಿದ್ದ ಗ್ಲಾಸ್‌ಹೌಸ್ ಸಾರ್ವಜನಿಕರಿಗೆ ಮನೋರಂಜನೆಯ ಕೇಂದ್ರವಾಗಿ ಮಾರ್ಪಟ್ಟಿದೆ.
Senior Congress Leader Shamanur Shivashankarappa Dies at 94



