Udupi News Kota : ಕೋಟತಟ್ಟು ಪಡುಕರೆಯಲ್ಲಿ ಯುವಕನ ಕೊಲೆ ? ನಾಲ್ವರು ವಶಕ್ಕೆ, ನಡೆದಿದ್ದೇನು ?

Udupi News : ಉಡುಪಿ : ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ನಡೆದ ಹೊಡೆದಾಟದಲ್ಲಿ ಓರ್ವ ಯುವಕ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲ್ಲೂಕಿನ ಕೋಟ (Kota) ಪೊಲೀಸ್ ಠಾಣಾ ವ್ಯಾಪ್ತಿಯ ಕೋಟತಟ್ಟು ಪಡುಕರೆ ಗ್ರಾಮದ ಐದು ಸೆಂಟ್ಸ್ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಪಡುಕರೆ ನಿವಾಸಿ ಸಂತೋಷ್ ಮೊಗವೀರ (30 ವರ್ಷ) ಸಾವನ್ನಪ್ಪಿದವರು.
ಶಬರಿಮಲೆ ಯಾತ್ರೆಯಿಂದ ವಾಪಸ್ಸಾಗಿದ್ದ ಯುವಕರು ಭಾನುವಾರ ರಾತ್ರಿ ಮದ್ಯಪಾನ ಮಾಡಿ ಸಂಭ್ರಮಿಸುತ್ತಿದ್ದ ವೇಳೆ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ಉಂಟಾಗಿ ಅದು ಹೊಡೆದಾಟಕ್ಕೆ ತಿರುಗಿದೆ ಎನ್ನಲಾಗಿದೆ. ಈ ವೇಳೆ ಸಂತೋಷ್ ಮೊಗವೀರನಿಗೆ ಮಾರಣಾಂತಿಕ ಹಲ್ಲೆ ನಡೆಯಿದ್ದು, ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಕುಡಿದ ಮತ್ತಲ್ಲಿ ಟ್ಯಾಂಕರ್ ಚಾಲನೆ – ತಪ್ಪಿತು ಬಾರೀ ದುರಂತ
ಘಟನೆಯ ಮಾಹಿತಿ ಪಡೆದ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಟಿ., ಠಾಣಾ ಎಎಸ್‌ಐ ಮಾಂತೇಶ್ ಜಾಭಗೌಡ ಹಾಗೂ ಹೆಡ್ ಕಾನ್ಸ್ಟೇಬಲ್‌ಗಳಾದ ಪ್ರದೀಪ್ ಮತ್ತು ಅಶೋಕ್ ಅವರುಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಕಾರಣವಾದ ನಿಖರ ಹಿನ್ನೆಲೆ ಕುರಿತು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : ಅಕ್ರಮ ಬಾಂಗ್ಲಾ ವಲಸಿಗರಿಗೆ 2 ವರ್ಷ ಶಿಕ್ಷೆ
Udupi News Kotathattu Padukare Murder 4 Arrest Kota Police Station



