ಬೆಳ್ತಂಗಡಿ : ಅಕ್ರಮ ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಬಂಧನ ; ಮನೆ, ಕೊಟ್ಟಿಗೆ ಜಪ್ತಿ

ಬೆಳ್ತಂಗಡಿ (Belthangady) : ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಜಾನುವಾರನ್ನು ಸಾಗಿಸುತ್ತಿದ್ದ ಗೂಡ್ಸ್​ ಆಟೋವನ್ನು ತಡೆಹಿಡಿಯುವಲ್ಲಿ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

KA-70-8686 ಸಂಖ್ಯೆಯ ಗೂಡ್ಸ್​ ಆಟೋವನ್ನು ಪರಿಶೀಲಿಸಿದಾಗ ಜಾನುವಾರನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿರುವದು ಪೊಲೀಸರ ಗಮನಕ್ಕೆ ಬಂದಿದೆ. ವಾಹನ ಚಾಲಕನನ್ನು ಬಂಟ್ವಾಳ ತಾಲೂಕಿನ ಮಣಿ ನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ್ ಪೂಜಾರಿ ಎಂದು ಗುರುತಿಸಲಾಗಿದೆ.

ಈತ ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ನಿವಾಸದಿಂದ ಯಾವುದೇ ದಾಖಲಾತಿ ಅಥವಾ ಪರವಾನಿಗೆ ಪಡೆಯದೇ ಗೋ ಹತ್ಯೆ ನಡೆಸಿ ಮಾಂಸ ಪಡೆಯುವ ಉದ್ದೇಶದಿಂದಲೇ ಗೋವನ್ನು ಸಾಗಾಟ ನಡೆಸುತ್ತಿದ್ದ ಎಂಬುದು ತಿಳಿದುಬಂದಿದೆ.

ಈ ಸಂಬಂಧ ಆರೋಪಿ ಶ್ರೀಧರ್​ ಎಂಬಾತನನ್ನು ಬಂಧಿಸಲಾಗಿದೆ. ಅಲ್ಲದೇ ಬಂಧಿತ ಆರೋಪಿಯಿಂದ ಗೂಡ್ಸ್ ಆಟೋ, ಜಾನುವಾರು ಹಾಗೂ 1 ಮೊಬೈಲ್​ ಫೋನ್​ನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಪ್ರಾಣಿ ಹಿಂಸೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Belthangady Man arrested for transporting illegal cattle house barn seized

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories