ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿ ಇಲ್ಲ ಯಾವುದೇ ತಿದ್ದುಪಡಿ : ಜಾಣ ನಡೆ ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿ ತಿದ್ದುಪಡಿ ತರಲು ಎಲ್ಲಾ ರೀತಿಯ ತಯಾರಿ ನಡೆಸಿದ್ದ ರಾಜ್ಯ ಸರ್ಕಾರ ಕೊನೆ ಕ್ಷಣದಲ್ಲಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕವನ್ನು ಮಂಡಿಸದೇ ಇರುವ ಮೂಲಕ ಜಾಣ ನಡೆ ಅನುಸರಿಸಿದೆ.

ಈ ಕಾಯ್ದೆಯ ಅಡಿಯಲ್ಲಿ ಜಾನುವಾರುಗಳನ್ನು ಸಾಗಿಸಲು ಬಳಕೆ ಮಾಡುವ ವಾಹನಗಳು ಜಪ್ತಿ ಮಾಡಲಾದ ಬಳಿಕ, ಅದನ್ನು ಬಿಡಿಸಿಕೊಳ್ಳಲು ವಾಹನದ ಮೌಲ್ಯದಷ್ಟೇ ಬ್ಯಾಂಕ್​ ಖಾತ್ರಿ ನೀಡಬೇಕೆಂಬ ಕಠಿಣ ನಿಯಮವಿದೆ. ಈ ನಿಯಮಾವಳಿಯಲ್ಲಿ ಸಡಿಲಿಕೆ ಮಾಡಿ ವಿನಾಯಿತಿ ನೀಡಬೇಕೆಂದು ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧರಿಸಿತ್ತು. ಚಳಿಗಾಲದ ಅಧಿವೇಶನದಲ್ಲಿ ಈ ತಿದ್ದುಪಡಿ ವಿಧೇಯಕ ಮಂಡಿಸಬೇಕಿದ್ದ ರಾಜ್ಯ ಸರ್ಕಾರ ತನ್ನ ನಿರ್ಧಾರ ಬದಲಿಸಿದೆ.
ಬೆಳಗಾವಿ ಅಧಿವೇಶನದ ಮೊದಲ ದಿನವೇ 12 ವಿಧೇಯಕಗಳನ್ನು ಮಂಡಿಸಿದ ರಾಜ್ಯ ಸರ್ಕಾರ ಈ ವಿಧೇಯಕದ ಸುದ್ದಿ ಹೋಗಿಲ್ಲ.

ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಚಾಲಕರಿಗೆ ಗುಡ್ ನ್ಯೂಸ್‌: ದುಪ್ಪಟ್ಟಾಯ್ತು ಮಾಸಿಕ ಭತ್ಯೆ ಹಾಗೂ ಪುರಸ್ಕಾರ ದರ

ಈ ವಿಧೇಯಕನವನ್ನು ಮಂಡಿಸಿದರೆ ವಿಪಕ್ಷಗಳಿಗೆ ಸುಖಾ ಸುಮ್ಮನೇ ಆಹಾರವಾಗುತ್ತೇವೆ ಎಂಬುದು ರಾಜ್ಯ ಸರ್ಕಾರದ ಗಮನಕ್ಕೂ ಬಂದಿದೆ.ಮೊದಲೇ ಕಾಂಗ್ರೆಸ್​ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತೆ ಎಂಬ ಅಪವಾದ ಇದೆ. ಈ ಸಂದರ್ಭದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿ ತಿದ್ದುಪಡಿ ತಂದು ನಿಯಮಾವಳಿಗಳಲ್ಲಿ ಸಡಲಿಕೆ ಮಾಡಿದಲ್ಲಿ ತೀವ್ರ ವಿರೋಧ ಎದುರಿಸಬೇಕಾಗಬಹುದು ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸದ್ಯ ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಮುಟ್ಟದೇ ಇರಲು ತೀರ್ಮಾನಿಸಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories