ಇಥಿಯೋಪಿಯಾದ ಅತ್ಯುನ್ನತ ಗೌರವ ಸ್ವೀಕರಿಸಿದ ‘ನಮೋ’ : ಹೊಸ ದಾಖಲೆ ಬರೆದ ಪ್ರಧಾನಿ ಮೋದಿ

ತಮ್ಮ ರಾಜಕೀಯ ಜೀವನದಲ್ಲಿ ಸಾಕಷ್ಟು ವಿದೇಶಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಪ್ರಧಾನಿ ಮೋದಿ ಇದೀಗ ಮತ್ತೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಇಥಿಯೋಪಿಯಾಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಈ ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇಥಿಯೋಪಿಯಾದ ಮಹಾನ್​ ಗೌರವ್​ ನಿಶಾನ್​ ಪಡೆದ ಮೊಟ್ಟ ಮೊದಲ ವಿದೇಶಿ ನಾಯಕ ಎಂಬ ಹೆಗ್ಗಳಿಕೆ ಇವರದ್ದಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿಶ್ವದ ಅತ್ಯಂತ ಪುರಾತನ ನಾಗರಿಕತೆಗಳಲ್ಲಿ ಒಂದರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಕ್ಕೆ ಸಂತಸವಿದೆ. ಇದು ಇಡೀ ಭಾರತಕ್ಕೆ ಅತ್ಯಂತ ಹೆಮ್ಮೆಯ ಕ್ಷಣ. ನನ್ನ ಸ್ನೇಹಿತ ಹಾಗೂ ಪ್ರಧಾನಿ ಅಬಿ ಅಹ್ಮದ್​ ಅಲಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಭವನಕ್ಕೆ ಲೋಕಭವನವೆಂದು ಮರುನಾಮಕರಣ : ಕೇಂದ್ರದ ನಡೆಗೆ ರಾಜ್ಯ ಸರ್ಕಾರದಿಂದ ಆಕ್ಷೇಪ

ನಾವು ಇಥಿಯೋಪಿಯಾದ ರಕ್ಷಣೆಗೆ ಬದ್ಧರಾಗಿದ್ದೇವೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜಾಗತಿಕ ಒಗ್ಗಟ್ಟಿನ ಬಲ ಪ್ರದರ್ಶಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ತ್ರಿರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಿ ಮೋದಿ ಜೋರ್ಡಾನ್​ನಿಂದ ಆಡಿಸ್​ ಅಬಾಬಾಗೆ ಆಗಮಿಸಿದ್ದಾರೆ .

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories