ರಾಜ್ಯದಲ್ಲಿ ಬದಲಾಗಲಿದೆಯಾ ಶಾಲಾ ಆರಂಭದ ಸಮಯ? ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಆಗ್ರಹ

ರಾಜ್ಯದಲ್ಲಿ ಅತಿಯಾಗಿ ಮಳೆ ಸಂಭವಿಸುತ್ತಿದ್ದ ಸಂದರ್ಭದಲ್ಲಿ ರಜೆ ಪಡೆದುಕೊಂಡಿದ್ದ ಶಾಲಾ ವಿದ್ಯಾರ್ಥಿಗಳಿಗೆ ಇದೀಗ ಕೊರೆಯುವ ಚಳಿ ಕೂಡ ವರದಾನವಾಗಿ ಸಂಭವಿಸುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಈ ಸಂಬಂಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಪತ್ರ ಬರೆದಿದ್ದು ರಾಜ್ಯಾದ್ಯಂತ ಶಾಲೆಗಳ ಆರಂಭದ ಸಮಯ ಬದಲಿಸುವಂತೆ ಮನವಿ ಮಾಡಿದೆ.

ರಾಜ್ಯದಲ್ಲಿ ಚಳಿಗಾಳಿಯ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವ ಅನಿವಾರ್ಯತೆಯಿದೆ. ಆದ್ದರಿಂದ ರಾಜ್ಯದಲ್ಲಿ ಶಾಲೆಗಳ ಆರಂಭದ ಸಮಯ ಬದಲಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮನವಿ ಮಾಡಿದೆ.

ಪತ್ರದಲ್ಲೇನಿದೆ ?

ರಾಜ್ಯದಲ್ಲಿ ಪ್ರಸ್ತುತ ಚಳಿಗಾಳಿ ಮಿತಿಮೀರಿದೆ. ಮಕ್ಕಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ. ಹಲವು ಕಡೆಗಳಲ್ಲಿ ಬೆಳಗ್ಗೆ 8 ರಿಂದ 8:30ರ ವೇಳೆಗೆ ಶಾಲೆಗಳು ಆರಂಭಗೊಳ್ಳುತ್ತದೆ. ತಾಪಮಾನ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಎಲ್​ಕೆಜಿಯಿಂದ ಪಿಯುಸಿವರೆಗೆ ಶಾಲೆಯ ಆರಂಭದ ಸಮಯವನ್ನು 9:30ಕ್ಕೆ ಬದಲಾಯಿಸಬೇಕು ಎಂದು ಮನವಿ ಮಾಡಲಾಗಿದೆ. ತೀವ್ರವಾದ ಚಳಿಯಿಂದಾಗಿ ಶೀತ, ಜ್ವರ ಹಾಗೂ ಉಸಿರಾಟದ ಸಮಸ್ಯೆ ಎದುರಾಗುವ ಸಮಸ್ಯೆ ಇರುವುದರಿಂದ ಈ ಕ್ರಮ ತೆಗೆದುಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್​ ಕೋಸುಂಬೆ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಶಾಲಾ ಮುಖ್ಯಶಿಕ್ಷಕರಿಗೆ ಸಂಕಷ್ಟ ತಂದ ಮೊಟ್ಟೆ : ಸಾಲುತ್ತಿಲ್ಲ ರಾಜ್ಯ ಸರ್ಕಾರದ ಅನುದಾನ

ಉತ್ತರ ಕರ್ನಾಟಕ ಭಾಗದಲ್ಲಿ ಈ ಬಾರಿ ತೀವ್ರ ಚಳಿಯಿದ್ದು ಕನಿಷ್ಠ ತಾಪಮಾನ 9 ಡಿಗ್ರಿಯವರೆಗೂ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಪರಿಸ್ಥಿತಿಯಲ್ಲಿ ಬೆಳಗ್ಗೆ ಬೇಗನೇ ಎದ್ದು ಶಾಲೆಗೆ ತಯಾರಾಗುವುದು ಮಕ್ಕಳ ಆರೋಗ್ಯದ ದೃಷ್ಠಿಯಿಂದ ಸೂಕ್ತವಲ್ಲ. ಹೀಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ಶೈಕ್ಷಣಿಕ ಇಲಾಖೆಗೆ ಮನವಿ ಮಾಡಲಾಗಿದೆ. ಈ ಸಂಬಂಧ ಆಯೋಗದ ಮನವಿಗೆ ಇಲಾಖೆ ಯಾವ ರೀತಿ ಕ್ರಮ ಕೈಗೊಳ್ಳುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories