ಬೆಂಗಳೂರು : ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದೆ. ರಾಜ್ಯದಲ್ಲಿಂದು ಒಟ್ಟು 8,642 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,49,590 ಕ್ಕೆ ಏರಿಕೆಯಾಗಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ದಕ್ಷಿಣ ಕ್ನನಡ, ದಾವಣಗೆರೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿಂದು ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿಂದು ಬರೋಬ್ಬರಿ 2,804 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 96,910ಕ್ಕೆ ಏರಿಕೆಯಾಗಿದೆ. ಶಿವಮೊಗ್ಗ ಜಿಲ್ಲೆಗೆ ಕೊರೊನಾ ಇಂದು ಬಿಕ್ ಶಾಕ್ ಕೊಟ್ಟಿದ್ದು, 915 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ ಮೈಸೂರಿನಲ್ಲಿ 562, ಬಳ್ಳಾರಿ 537, ಬೆಳಗಾವಿ 379, ಉಡುಪಿ 375, ದಕ್ಷಿಣ ಕನ್ನಡ 234, ಹಾಸನ 228 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಭಾರೀ ಏರಿಕೆಯಾಗಿದೆ.


