ರಾಜ್ಯದಲ್ಲಿ ಮುಂದುವರಿದ ಶೀತಗಾಳಿಯ ಅಬ್ಬರ : ಭಾರೀ ಚಳಿಗೆ ಕರ್ನಾಟಕ ಗಢ ಗಢ

ಇಷ್ಟು ದಿನ ವರುಣನ ನರ್ತನಕ್ಕೆ ತತ್ತರಿಸಿದ್ದ ರಾಜ್ಯದ ಜನತೆ ಈಗ ಕುಸಿಯುತ್ತಿರುವ ತಾಪಮಾನದಿಂದಾಗಿ ಗಢ ಗಢ ನಡುಗುವಂತಾಗಿದೆ. ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಲೇ ಇದ್ದು ಮೈನಡುಗಿಸುವ ಚಳಿಗೆ ತತ್ತರಿಸಿದ್ದಾರೆ. ಈ ಎಲ್ಲದರ ನಡುವೆ ರಾಜ್ಯದಲ್ಲಿ ಇನ್ನೂ 2 ದಿನಗಳ ಕಾಲ ಶೀತಗಾಳಿ ಇದೇ ರೀತಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಶೀತ ಅಲೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಶೀತ ಅಲೆ ವ್ಯಾಪಕವಾಗಿ ಪರಿಣಾಮ ಬೀರಲಿರುವ ಬೀದ‌ರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಬದಲಾಗಲಿದೆಯಾ ಶಾಲಾ ಆರಂಭದ ಸಮಯ? ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಆಗ್ರಹ

ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಶೀತ ಅಲೆ ಇರಲಿದ್ದು, ಹೀಗಾಗಿ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇತ್ತ ಕರಾವಳಿ ಭಾಗದಲ್ಲಿಯೂ ಚಳಿ ಮುಂದುವರಿದಿದೆ. ಬಹಳ ವರ್ಷಗಳ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಈ ಪ್ರಮಾಣದಲ್ಲಿ ಶೀತ ಅಲೆ ಕಾಣಿಸಿಕೊಂಡಿದೆ. ಮುಂಜಾನೆ ಹಾಗೂ ರಾತ್ರಿ ಸಮಯದಲ್ಲಿ ಚಳಿಯ ಪ್ರಮಾಣ ಅತ್ಯಧಿಕವಾಗಿದ್ದು ಗ್ರಾಮೀಣ ಭಾಗಗಳಲ್ಲಿ 18 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ದಾಖಲಾಗುತ್ತಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories