ಕೆಎಸ್​ಆರ್​ಟಿಸಿ ಮಹಿಳಾ ಸಿಬ್ಬಂದಿಗೆ ಹೊಸ ವರ್ಷದ ಗಿಫ್ಟ್​ : ಜನವರಿ 1 ರಿಂದ ಋತುಚಕ್ರದ ರಜೆ ಜಾರಿ

ಕೆಎಸ್​ಆರ್​ಟಿಸಿ ಮಹಿಳಾ ಸಿಬ್ಬಂದಿಗೆ ಹೊಸ ವರ್ಷದ ಗಿಫ್ಟ್ ದೊರಕಿದೆ. ಜನವರಿ 1 ರಿಂದ ಅನ್ವಯವಾಗುವಂತೆ ರಾಜ್ಯದ ಕೆಎಸ್​ಆರ್​ಟಿಸಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಈ ಸಂಬಂಧ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಆದೇಶ ಹೊರಡಿಸಿದ್ದಾರೆ.

ಋತುಚಕ್ರದ ರಜೆ ಮಾಸಿಕವಾಗಿ 1 ದಿನ ಪಡೆಯಬಹುದಾಗಿದೆ. ಇದಕ್ಕಾಗಿ ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ರಜೆಗಳು ಮುಂದಿನ ತಿಂಗಳಿಗೆ ಕ್ಯಾರಿ ಓವರ್​ ಆಗುವುದಿಲ್ಲ. 18 ರಿಂದ 52 ವರ್ಷ ಪ್ರಾಯದ ಮಹಿಳಾ ಸಿಬ್ಬಂದಿ ಈ ರಜೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಡಿಸೆಂಬ‌ರ್ 31 ರೊಳಗೆ ಈ ಕೆಲಸ ಮಾಡದಿದ್ದರೆ ನಿಷ್ಕ್ರಿಯವಾಗಲಿದೆ ನಿಮ್ಮ ಪ್ಯಾನ್ ಕಾರ್ಡ್ !

ಮಹಿಳಾ ಸಿಬ್ಬಂದಿ ಆಯಾ ತಿಂಗಳಲ್ಲಿಯೇ ಋತುಚಕ್ರದ ರಜೆ ಪಡೆಯಬೇಕಾಗುತ್ತದೆ. ಮುಟ್ಟಿನ ರಜೆ ಪಡೆಯುವವರು ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ರಜೆಯ ಬಗ್ಗೆ ನಮೂದಿಸಬೇಕು . ಮುಂದಿನ ತಿಂಗಳಿಗೆ ಈ ರಜೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಸೂಚನೆ ನೀಡಿದ್ದಾರೆ

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories