ಕರಾವಳಿ ಭಾಗದ ಜನತೆಗೆ ಗುಡ್ನ್ಯೂಸ್.. ಶೀಘ್ರದಲ್ಲೇ ವಂದೇ ಭಾರತ್ ಎಕ್ಸ್ಪ್ರೆಸ್
ಕರಾವಳಿ ಜನತೆಗೆ ಕೇಂದ್ರ ಸರ್ಕಾರ ಹೊಸ ವರ್ಷಕ್ಕೆ ಬಂಪರ್ ಉಡುಗೊರೆಯನ್ನೇ ನೀಡಿದೆ. ಮಂಗಳೂರು – ಬೆಂಗಳೂರು ಮಾರ್ಗವಾಗಿ ಶೀಘ್ರದಲ್ಲಿಯೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಗೊಳ್ಳಲಿದೆ. ಈ ಮೂಲಕ ಕರಾವಳಿಯ ಪ್ರಯಾಣ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ ಸೆಮಿ-ಹೈಸ್ಪೀಡ್ ರೈಲು ಸೇವೆ ಕೊನೆಗೂ ಹಳಿಗೆ ಬರಲಿದೆ ಎಂಬ ಸುಳಿವು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಾದ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸುವವರಿಗೆ ಈ ರೈಲಿನಿಂದ ತೀವ್ರ ಅನುಕೂಲವಾಗಲಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಶೀಘ್ರದಲ್ಲಿಯೇ ವಂದೇ ಭಾರತ್ ರೈಲುಗಳು ಓಡಾಡಲಿದೆ. ಮಂಗಳೂರು ಭಾಗದ ಜನತೆಯ ಬಹುದಿನಗಳ ಬೇಡಿಕೆ ಈಡೇರಲಿದೆ. ಈಗಾಗಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ಸೇವೆ ಆರಂಭಿಸುವ ನಿರ್ಧಾರ ಅಂತಿಮವಾಗಿದೆ. . ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಘಾಟ್ ವಿಭಾಗದಲ್ಲಿ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡ ಬಳಿಕ ರೈಲು ಸೇವೆ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೋಗಿಲು ಬಡಾವಣೆ ನಿವಾಸಿಗಳಿಗೆ ಮನೆ ಹಸ್ತಾಂತರ 1 ದಿನ ವಿಳಂಬ : ಸಚಿವ ಜಮೀರ್ ಅಹಮದ್ ಖಾನ್
ಇದು ರಾಜ್ಯ ರಾಜಧಾನಿ ಮತ್ತು ಕರಾವಳಿ ಭಾಗದ ಸಂಪರ್ಕವನ್ನು ಈ ಹೊಸ ರೈಲು ಮತ್ತಷ್ಟು ಗಟ್ಟಿಗೊಳಿಸಲಿದೆ. ರೈಲು ಕಾರ್ಯಾಚರಣೆಯು ಮತ್ತಷ್ಟು ಇಂಧನ ಬಳಕೆಯನ್ನು ಕಡಿಮೆ ಮಾಡಲಿದೆ.



