ಮೊಬೈಲ್ ನೆಟ್ವರ್ಕ್ ಹುಡುಕುವಾಗ 17ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು!
Crime News Today: ನೋಯ್ಡಾ: ಸೆಲ್ಫೋನ್ ನೆಟ್ವರ್ಕ್ ಸಿಗುತ್ತಿಲ್ಲ ಎಂದು ಬಾಲ್ಕನಿಗೆ ಹೋದ ವ್ಯಕ್ತಿಯೊಬ್ಬರು ನಿಯಂತ್ರಣ ತಪ್ಪಿ 17ನೇ ಮಹಡಿಯಿಂದ ಕೆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೋಯ್ಡಾದ ಸೆಕ್ಟರ್ 137ರಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 137ರಲ್ಲಿರುವ ‘ಪಾರಸ್ ಟಿಯೆರಾ’ (Paras Tierea) ಎಂಬ ವಸತಿ ಸಮುಚ್ಚಯದಲ್ಲಿ ಈ ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಸೋನು ಕುಮಾರ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸೋನು ಅವರು ತಮ್ಮ ಅಪಾರ್ಟ್ಮೆಂಟ್ನ ಒಳಗೆ ನೆಟ್ವರ್ಕ್ ಸಮಸ್ಯೆ ಎದುರಿಸುತ್ತಿದ್ದರು. ಫೋನ್ನಲ್ಲಿ ಮಾತನಾಡಲು ಸಿಗ್ನಲ್ ಹುಡುಕುತ್ತಾ ಅವರು ಬಾಲ್ಕನಿಗೆ ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ನೇರವಾಗಿ 17ನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ.
ಬಿದ್ದ ರಭಸಕ್ಕೆ ಸೋನು ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯ ನಿವಾಸಿಗಳು ಮತ್ತು ಅಪಾರ್ಟ್ಮೆಂಟ್ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮಾರ್ಚ್ 2026ರೊಳಗೆ ₹500 ನೋಟು ಅಮಾನ್ಯೀಕರಣ? ಕೇಂದ್ರ ಸರ್ಕಾರ- ಆರ್ಬಿಐ ನೀಡಿದ ಸ್ಪಷ್ಟನೆ ಇಲ್ಲಿದೆ
ಇದು ಆಕಸ್ಮಿಕ ಅಪಘಾತವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವಸತಿ ಸಮುಚ್ಚಯದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಕುಟುಂಬದವರಿಂದ ಮಾಹಿತಿ ಪಡೆಯಲಾಗುತ್ತಿದೆ. ಈ ಘಟನೆಯು ಅಪಾರ್ಟ್ಮೆಂಟ್ಗಳಲ್ಲಿ ಬಾಲ್ಕನಿಗಳ ಸುರಕ್ಷತೆ ಮತ್ತು ಎತ್ತರದ ಪ್ರದೇಶಗಳಲ್ಲಿ ಮೊಬೈಲ್ ಬಳಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಮತ್ತೆ ಚರ್ಚೆಯನ್ನು ಹುಟ್ಟುಹಾಕಿದೆ.



