ಶೆಟ್ರಕಟ್ಟೆ KSRTC Bus- Tipper ಅಪಘಾತ : 15 ಮಂದಿಗೆ ಗಾಯ, 3 ಮಂದಿ ಗಂಭೀರ : ಉಡುಪಿ ಎಸ್‌ಪಿ

ಕುಂದಾಪುರ : ಶೆಟ್ರಕಟ್ಟೆಯಲ್ಲಿ ನಡೆದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟಿಪ್ಪರ್‌ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 15 ಮಂದಿ ಗಾಯಗೊಂಡಿದ್ದು, ಇದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಜೈಶಂಕರ್‌ ಮಾಹಿತಿ ನೀಡಿದ್ದಾರೆ.

ಜನವರಿ 5 ರಂದು ಸಂಜೆ 4.35ಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು – ನೇರಳಕಟ್ಟೆಯ ಶೆಟ್ರಕಟ್ಟೆ ತಿರುವಿನಲ್ಲಿ ಕೆಎಸ್ಆರ್‌ಟಿಸಿ ಬಸ್‌ಗೆ ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಬರುತ್ತಿದ್ದ ಟಿಪ್ಪರ್‌ ವಾಹನ ಢಿಕ್ಕಿಯಾಗಿದೆ.

ಟಿಪ್ಪರ್‌ ವಾಹನದ ಚಾಲಕ ರಾಘವೇಂದ್ರ ತನ್ನ ವಾಹನವನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದು, ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದಿದೆ.

Also Read : Exclusive Vedio : ಕುಂದಾಪುರ : ಕೆಎಸ್‌ಆರ್‌ಟಿಸಿ ಬಸ್‌ – ಟಿಪ್ಪರ್‌ ಅಪಘಾತ : ಅಷ್ಟಕ್ಕೂ ಆಗಿದ್ದೇನು ? ಇಲ್ಲಿದೆ ಸಿಸಿ ಕ್ಯಾಮೆರಾ ವಿಡಿಯೋ

ಢಿಕ್ಕಿಯ ರಭಸಕ್ಕೆ ಬಸ್ಸಿನ ಬಲಬದಿ ಸಂಪೂರ್ಣವಾಗಿ ಜಖಂ ಆಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಈ ಪೈಕಿ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳಿದ ಗಾಯಾಳುಗಳನ್ನು ಕುಂದಾಪುರದ ಸರಕಾರಿ ಹಾಗೂ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಚಾಲಕ ರಾಘವೇಂದ್ರ ಸದ್ಯ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಗಾಯಗೊಂಡಿರುವವರ ಪೈಕಿ 7 ಮಂದಿ ವಿದ್ಯಾರ್ಥಿಗಳು ಎಂದು ತಿಳಿಸಿದ್ದಾರೆ.

Also Read : ಕುಂದಾಪುರ : ಕೆಎಸ್ಆರ್‌ಟಿಸಿ – ಟಿಪ್ಪರ್‌ ಢಿಕ್ಕಿ : ಹಲವು ಕಾಲೇಜು ವಿದ್ಯಾರ್ಥಿಗಳು ಗಂಭೀರ

ಶೆಟ್ರಕಟ್ಟೆಯಲ್ಲಿ ನಡೆದಿರುವ ಅಪಘಾತದ CC Camera ವಿಡಿಯೋ

English News : www.newsnext.live

Kundapura Shetrakatte KSRTC Bus-Tipper accident: 15 injured, 3 seriously Udupi SP

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories