ಉಡುಪಿ ಪರ್ಯಾಯ ಪುರಪ್ರವೇಶ ಮೆರವಣಿಗೆ – ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

Udupi Paryaya Purapravesh : ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಪುರಪ್ರವೇಶದ ಹಿನ್ನೆಲೆಯಲ್ಲಿ ಇಂದು ಉಡುಪಿ ನಗರದ ಸಂಚಾರ ವ್ಯವಸ್ಥೆಯಲ್ಲಿ ಬಾರೀ ಬದಲಾವಣೆಯನ್ನು ಮಾಡಲಾಗಿದೆ.
ಪರ್ಯಾಯ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ ವ್ಯಾಪ್ತಿಯಲ್ಲಿ ಸಂಚಾರ ನಿಯಮದಲ್ಲಿ ಬದಲಾವಣೆಯನ್ನು ಮಾಡಲಾಗಿದೆ.
ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ನಿಯಮ 221(ಎ)(2) & (5) ರ ಆನ್ವಯ, ಜ. 9 ರಂದು ಮದ್ಯಾಹ್ನ 1.00 ಗಂಟೆಯಿಂದ ಸಂಜೆ 07.00 ಗಂಟೆಯವರೆಗೆ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ ಮಾಡಿ ಮತ್ತು ಬದಲಿ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಉಡುಪಿ ಜಿಲ್ಲೆಯಲ್ಲಿ ಕುಸಿದ ಬಾಲ ಆಧಾರ್ ಸಂಖ್ಯೆ : ಪೋಷಕರ ನಿರ್ಲಕ್ಷ್ಯವೇ ಇದಕ್ಕೆ ಕಾರಣ
ಮಣಿಪಾಲದಿಂದ ಉಡುಪಿ ನಗರಕ್ಕೆ ಹೋಗುವಂತಹ ವಾಹನಗಳು ಎಂ.ಜಿ.ಎಂ ಎದುರಿನ ಸುನಾಗ್ ಆಸ್ಪತ್ರೆ ಬಳಿ ಎಡ ತಿರುವು ಪಡೆದು ಸುದೀಂದ್ರ ಕಲ್ಯಾಣ ಮಂಟಪ ಮಾರ್ಗವಾಗಿ ಎಸ್.ಕೆ.ಎಂ ಬಳಿ ಎಡ ತಿರುವು ಪಡೆದು ಬೀಡಿನಗುಡ್ಡೆ-ಚಿಟ್ಟಾಡಿ-ಅಮ್ಮಣ್ಣಿ ರಾಮಣ್ಣ ಹಾಲ್ ಮುಂದಿನ ರಸ್ತೆಯಿಂದ ಮಿಷನ್ ಕಂಪೌಂಡ್ -ಜೋಡುಕಟ್ಟೆ ತಲುಪಿ ಉಡುಪಿ ನಗರಕ್ಕೆ ತೆರಳುವುದು.
ಶಿರಬೀಡು ಜಂಕ್ಷನ್ ನಿಂದ ಕಿದಿಯೂರು ಹೋಟೆಲ್ ಮೂಲಕ ಸರ್ವೀಸ್ ಬಸ್ ನಿಲ್ದಾಣದ ವರೆಗಿನ ಏಕಮುಖ ಸಂಚಾರ ವ್ಯವಸ್ಥೆಯ ರಸ್ತೆಯಲ್ಲಿ ಮೆರವಣಿಗೆ ಪ್ರವೇಶಿಸುವ ಸಮಯದಲ್ಲಿ ವಾಹನ ಸಂಚಾರವನ್ನು ನಿರ್ಭಂದಿಸಲಾಗಿದೆ.
ಇದನ್ನೂ ಓದಿ : ಕುಂದಾಪುರ : ಮಂಗನ ಕಾಯಿಲೆ ಆತಂಕ, ಒಂದೇ ವಾರದಲ್ಲಿ 5 ಮಂಗಗಳ ಸಾವು
ಮಂಗಳೂರು ಕಡೆಯಿಂದ ಉಡುಪಿ ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಓಲ್ಡ್ ಡಯಾನ ಸರ್ಕಲ್ ನಿಂದ ಮಿತ್ರ ಪ್ರಿಯಾ ಜಂಕ್ಷನ್ ಮುಖೇನಾ ಚಿತ್ತರಂಜನ್ ಸರ್ಕಲ್ ಸಂಸ್ಕೃತ ಕಾಲೇಜ್ ಜಂಕ್ಷನ್ ಜಾಮೀಯಾ ಮಸೀದಿ ಜಂಕ್ಷನ್ ನಿಂದ ಎಡತಿರುವು ಪಡೆದು ಸರ್ವೀಸ್ ಬಸ್ ನಿಲ್ದಾಣ ತಲುಪುವಂತೆ ಜಿಲ್ಲಾಧಿಕಾರಿ ಗಳ ಕಚೇರಿ ಪ್ರಕಟಣೆ ತಿಳಿಸಿದೆ.
Udupi Paryaya Purapravesh Parade – Alternative arrangement for vehicular traffic



