ಪರಶುರಾಮ ಥೀಂ ಪಾರ್ಕ್ ಮೇಲ್ಚಾವಣಿ ಕದ್ದವರು ಕಾಂಗ್ರೆಸ್‌ನ ‘ಬ್ರದರ್ಸ್’: ಶಾಸಕ ಸುನಿಲ್ ಕುಮಾರ್ ತೀವ್ರ ವಾಗ್ದಾಳಿ

Parashurama Theme Park stolen case: ಕಾರ್ಕಳ: ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅತ್ಯಂತ ಕಠಿಣ ಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. “ಪರಶುರಾಮ ಥೀಂ ಪಾರ್ಕ್ ಮೇಲ್ಚಾವಣಿ ಕದ್ದವರು ಕಾಂಗ್ರೆಸ್ ನ ಬ್ರದರ್ಸ್” ಎಂದು ಅವರು ನೇರವಾಗಿ ಆರೋಪಿಸಿದ್ದಾರೆ.

ಕಳೆದ ವಾರ ಥೀಂ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿದ ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿರುವ ಅವರು, “ಪರಶುರಾಮ ಥೀಂಪಾರ್ಕ್ ಪಾಳು ಬೀಳುವಂತೆ ಮಾಡಿದ್ದೇ ಕಾಂಗ್ರೆಸ್. ಭಾರತದ ಶ್ರದ್ಧಾ ಕೇಂದ್ರಗಳನ್ನು ಅಂದು ಘಜ್ನಿ, ಘೋರಿ, ಖಿಲ್ಜಿ ಮತ್ತು ಮೊಘಲರು ಒಡೆದರೆ, ಇಂದು ಈ ಥೀಂ ಪಾರ್ಕ್‌ನ ಮೇಲ್ಚಾವಣಿ ಕದ್ದವರು ಅವರ ವಂಶಸ್ಥರು. ಇದಕ್ಕೆ ಕಾರ್ಕಳ ಕಾಂಗ್ರೆಸ್ ಮುಖಂಡರು ಈಗ ಏನೆನ್ನುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

ಪರಶುರಾಮ ಸೃಷ್ಟಿ ಎಂದು ಹೆಸರಾದ ಕರಾವಳಿಯಲ್ಲಿ ಪರಶುರಾಮನ ಹೆಜ್ಜೆಗುರುತುಗಳು ಇರಲೇಬಾರದು ಎಂಬ ಉದ್ದೇಶದಿಂದ ಥೀಂ ಪಾರ್ಕ್ ಕಾಮಗಾರಿಯನ್ನು ಕಾಂಗ್ರೆಸ್ ಅರ್ಧಕ್ಕೆ ನಿಲ್ಲಿಸಿದೆ. ಈಗ ನಿಮ್ಮ ಮತಬ್ಯಾಂಕ್‌ನ ಪುಂಡರು ಇಲ್ಲಿ ಕಳ್ಳತನ ಮಾಡಿದ್ದಾರೆ. ಈ ಪುಂಡರಿಗೆ ಇಂತಹ ಕೃತ್ಯವೆಸಗಲು ಧೈರ್ಯ ಬಂದಿದ್ದು ಕಾಂಗ್ರೆಸ್‌ನ ಹಿಂದೂ ವಿರೋಧಿ ಭಾವನೆಯ ಬಲದಿಂದ ಅಥವಾ ‘ಏನು ಬೇಕಾದರೂ ಮಾಡಿ ನಾವಿದ್ದೇವೆ’ ಎಂಬ ಚಿತಾವಣೆಯಿಂದಲೋ ಎಂದು ಅವರು ಹರಿಹಾಯ್ದಿದ್ದಾರೆ.

ಹಿಂದೂ ಭಾವನೆಗಳಿಗೆ ಘಾಸಿ ಮಾಡಿರುವುದರ ಜೊತೆಗೆ ಪ್ರವಾಸೋದ್ಯಮಕ್ಕೆ ಅಡ್ಡಿಪಡಿಸಿರುವ ಕಾಂಗ್ರೆಸ್‌ನ ಈ ತಪ್ಪು ಕೇವಲ ಮುಂದಿನ ಚುನಾವಣೆಯವರೆಗೆ ಮಾತ್ರವಲ್ಲ, ಶತಶತಮಾನಗಳವರೆಗೂ ಸ್ಥಾಯಿಯಾಗಿರುತ್ತದೆ. ಇಲ್ಲಿಂದಲೇ ಕಾಂಗ್ರೆಸ್ ಪಕ್ಷದ ಅಧಃಪತನದ ಕ್ಷಣಗಣನೆ ಪ್ರಾರಂಭವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories