ರಾಜ್ಯದಲ್ಲಿ ಮತ್ತೆ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಚುನಾವಣೆ ? : ಅಭಿಪ್ರಾಯ ಸಲ್ಲಿಸಲು ನೀವೂ ಅರ್ಹರು
ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಚುನಾವಣೆಯನ್ನು ಮತ್ತೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಉನ್ನತ ಶಿಕ್ಷಣ ಇಲಾಖೆಯು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಚುನಾವಣೆ ನಡೆಸಲು ಸಮ್ಮತಿ ನೀಡಿದೆ. ಆದರೆ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಸ್ಟೂಡೆಂಟ್ ಯುನಿಯನ್ ಚುನಾವಣೆ ನಡೆಸುವ ಬಗ್ಗೆ ಚರ್ಚೆ ಮುಂದುವರಿದಿದೆ ಎನ್ನಲಾಗಿದೆ.
ಸ್ಟೂಡೆಂಟ್ ಯೂನಿಯನ್ ಎಲೆಕ್ಷನ್ಗಳಿಂದ ವಿದ್ಯಾರ್ಥಿಗಳ ನಡುವೆ ಗಲಾಟೆ. ಸಂಘರ್ಷ ಏರ್ಪಡುವ ಅಪಾಯ ಇರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಒಂದು ಸಮಿತಿ ರಚನೆ ಮಾಡಲಾಗಿದ್ದು ಈ ಸಂಬಂಧ ಚರ್ಚೆ ನಡೆಸಲಾಗುತ್ತಿದೆ. ಜೊತೆಯಲ್ಲಿ ಶಿಕ್ಷಣ ತಜ್ಞರು ಸಾರ್ವಜನಿಕರು ಹಾಗೂ ಪೋಷಕರಿಂದ ಅಭಿಪ್ರಾಯ ಸಂಗ್ರಹಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.
ಸಾರ್ವಜನಿಕರು ಹಾಗೂ ಪೋಷಕರಿಂದ ಅಭಿಪ್ರಾಯ ಸಂಗ್ರಹಣೆಗೆಂದೇ karstudentselections@gmail.com ಎಂಬ ಮೇಲ್ ಐಡಿ ರಚಿಸಲಾಗಿದೆ. ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಈ ಮೇಲ್ ಐಡಿಯಲ್ಲಿ ಮುಕ್ತವಾಗಿ ಹಂಚಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಶಿಕ್ಷಣ ಇಲಾಖೆ ಕ್ರಮ : ಎಲ್ಲಾ ಶಾಲೆಗಳಲ್ಲಿ ಇನ್ಮುಂದೆ ವಾಟರ್ ಬೆಲ್ ಕಡ್ಡಾಯ
ಯುವಕರಲ್ಲಿ ನಾಯಕತ್ವದ ಗುಣ ಬೆಳೆಯಬೇಕು. ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಬೇಕು. ಎಂಬ ದೃಷ್ಠಿಕೋನದಲ್ಲಿ ರಾಜ್ಯ ಸರ್ಕಾರ ಮತ್ತೆ ಸ್ಟೂಡೆಂಟ್ ಯೂನಿಯನ್ ಚುನಾವಣೆಯನ್ನು ಮರಳಿ ತರಲು ಪ್ಲಾನ್ ರೂಪಿಸಿದೆ. ಆದರೆ ಕಾಲೇಜುಗಳಲ್ಲಿ ಚುನಾವಣೆ ವಿಚಾರಕ್ಕೆ ಸಾಕಷ್ಟು ಘಟನೆಗಳು ನಡೆದು ಹೋಗಿರುವುದು ಆತಂಕದ ವಿಚಾರವಾಗಿದೆ. ಹೀಗಾಗಿ ಸಾರ್ವಜನಿಕರ ಅಭಿಪ್ರಾಯ ಇದಕ್ಕೆ ಯಾವ ರೀತಿ ಬರಲಿದೆ ಅನ್ನೋದನ್ನ ಕಾದು ನೋಡಬೇಕಿದೆ.



