ಫೆಬ್ರವರಿಯಿಂದ ರಾಜ್ಯದಲ್ಲಿ ಎಸ್​ಐಆರ್ : ಈ ಕೆಲಸ ನೀವು ಮಾಡಿಲ್ಲವೆಂದರೆ ಮತದಾನದ ಹಕ್ಕು ನಿಮ್ಮ ಕೈ ತಪ್ಪಬಹುದು

ರಾಜ್ಯದಲ್ಲಿ ಮತದಾರರ ಪಟ್ಟಿಯ ಪೂರ್ವ ಪರಿಷ್ಕರಣೆ ಬಹುತೇಕ ಪೂರ್ಣಗೊಂಡಿದೆ. ಕರ್ನಾಟಕದಲ್ಲಿ ಎಸ್​ಐಆರ್​ಗೆ ಪೂರ್ವಭಾವಿಯಾಗಿ 2002ರ ಮತದಾರರ ಪಟ್ಟಿಯೊಂದಿಗೆ 2025ರ ಮತದಾರರ ಪಟ್ಟಿ ತಾಳೆ ಮಾಡಲಾಗುತ್ತಿದ್ದು, ರಾಜ್ಯದಲ್ಲಿರುವ 5.547 ಕೋಟಿ ಮತದಾರರ ಪೈಕಿ 3.05 ಕೋಟಿ ಮಂದಿಯ ವಿವರಗಳು ಈವರೆಗೆ ತಾಳೆಯಾಗಿದೆ. ಮುಂದಿನ ತಿಂಗಳಿನಿಂದ ಮತದಾರರ ಪಟ್ಟಿಯ ಪರಿಷ್ಕರಣೆಗೆ ಅಧಿಕೃತ ಚಾಲನೆ ದೊರಕುವ ಸಾಧ್ಯತೆಯಿದೆ.

ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಎಸ್​ಐಆರ್ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಜ್ಯದಲ್ಲಿ ಪೂರ್ವಭಾವಿಯಾಗಿ ಡಿಸೆಂಬರ್​ ತಿಂಗಳಿನಿಂದ ಚಾಲನೆ ದೊರಕಿದೆ. 2002ರ ಮತದಾರರ ಪಟ್ಟಿಯೊಂದಿಗೆ 2025ರ ಮತದಾರರ ಪಟ್ಟಿಯನ್ನು ತಾಳೆ ಮಾಡಲಾಗುತ್ತದೆ. ಸರಿಯಾದ ದಾಖಲೆ ನೀಡಿದವರು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಯುತ್ತಾರೆ.ಯಾರು ಈ ದಾಖಲೆಗಳನ್ನು ಸಲ್ಲಿಸುವುದಿಲ್ಲವೋ ಅವರು ಈ ಪಟ್ಟಿಯಿಂದ ಹೊರಗುಳಿಯುತ್ತಾರೆ. ಈ ತಿಂಗಳ ಅಂತ್ಯದ ವೇಳೆಗೆ ಎಸ್​ಐಆರ್​ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್​ ನ್ಯೂಸ್​ : 2 ಕಂತುಗಳ ಹಣ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ

ಇನ್ನು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಈ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ನಮ್ಮ ಪಕ್ಷ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಮತದಾರರ ಪಟ್ಟಿಯಿಂದ ಕೈತಪ್ಪಿ ಹೋಗುವಂತೆ ಆಗಬಾರದು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಹೇಳಿದರು.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories