ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ!

Eshwar Khandre | All India Veerashaiva Lingayat Mahasabha: ಬೆಂಗಳೂರು: ನಾಡಿನ ಪ್ರತಿಷ್ಠಿತ ಹಾಗೂ ಪ್ರಭಾವಿ ಸಂಸ್ಥೆಯಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜ್ಯದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಮಂಗಳವಾರ (ಜನವರಿ 20, 2026) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸುದೀರ್ಘ ಕಾಲ ಮಹಾಸಭಾದ ಸಾರಥ್ಯ ವಹಿಸಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಈ ಮಹತ್ವದ ಆಯ್ಕೆ ನಡೆದಿದೆ.

ಅವಿರೋಧ ಆಯ್ಕೆ: ಬೆಂಗಳೂರಿನಲ್ಲಿ ನಡೆದ ಮಹಾಸಭಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಲ್ಲ ಸದಸ್ಯರ ಒಮ್ಮತದೊಂದಿಗೆ ಈಶ್ವರ ಖಂಡ್ರೆ ಅವರನ್ನು 24ನೇ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಖಂಡ್ರೆ ಅವರಿಗೆ ಈಗ ಉನ್ನತ ಜವಾಬ್ದಾರಿ ನೀಡಲಾಗಿದೆ.

ಅವರು ತಮ್ಮ ತಂದೆ ಭೀಮಣ್ಣ ಖಂಡ್ರೆ ಅವರ ಹಾದಿಯಲ್ಲೇ ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಘಟಾನುಘಟಿಗಳ ಹೆಸರು ಕೇಳಿಬಂದಿತ್ತಾದರೂ, ಅಂತಿಮವಾಗಿ ಈಶ್ವರ ಖಂಡ್ರೆ ಅವರಿಗೆ ಮಣೆ ಹಾಕಲಾಯಿತು.

ಮುಂದಿನ ಸಂಕಲ್ಪಗಳೇನು?

ಆಯ್ಕೆಯ ನಂತರ ಮಾತನಾಡಿದ ಈಶ್ವರ ಖಂಡ್ರೆ ಅವರು ಸಮಾಜದ ಏಳಿಗೆಗಾಗಿ ಕೆಲವು ಪ್ರಮುಖ ಗುರಿಗಳನ್ನು ಘೋಷಿಸಿದರು:

ಒಗ್ಗಟ್ಟಿನ ಮಂತ್ರ: ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಸಮಾಜದ ಎಲ್ಲಾ ಒಳಪಂಗಡಗಳನ್ನು ಒಗ್ಗೂಡಿಸಿ ಬಲಿಷ್ಠ ಸಂಘಟನೆ ಕಟ್ಟುವುದು ನನ್ನ ಮೊದಲ ಆದ್ಯತೆ.

Brahmavara: ಕರವೇ ಮುಖಂಡ ಪ್ರವೀಣ್​ ವಿರುದ್ಧ ಹಲ್ಲೆ ಆರೋಪ : ಸುಷ್ಮಾ ಗೌಡ ವಿಚಾರಕ್ಕೆ ನಡೀತಾ ಡೆಡ್ಲಿ ಫೈಟ್​ !

ಹಾಸ್ಟೆಲ್ ನಿರ್ಮಾಣ: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗಾಗಿ ಅತ್ಯಾಧುನಿಕ ವಸತಿ ನಿಲಯ ನಿರ್ಮಾಣಕ್ಕೆ ಮುಂದಿನ ಮಾರ್ಚ್ ಒಳಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ: ಜಿಲ್ಲಾ ಕೇಂದ್ರಗಳಲ್ಲಿರುವ ವೀರಶೈವ ಭವನಗಳಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೆಪಿಎಸ್‌ಸಿ, ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ನೀಡುವ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

    Vidhya | ವಿದ್ಯಾಶ್ರೀ

    ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

    Related Stories