ನಾಯಿಮರಿ ಮೇಲೆ ಅತ್ಯಾಚಾರ ಎಸಗಿದ ಯುವಕ; ನಾಯಿಮರಿಯ ಸ್ಥಿತಿ ಗಂಭೀರ

R*ape On Dop: ಮುಂಬೈ: ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದ್ದು, ಕೇವಲ ಎರಡೂವರೆ ತಿಂಗಳ ನಾಯಿಮರಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಪೊಲೀಸ್ ದಾಳಿ ವೇಳೆ ಬಯಲಾದ ಕೃತ್ಯ:
ಮಲಾಡ್‌ನ ಸಾರ್ವಜನಿಕ ಶೌಚಾಲಯವೊಂದರಲ್ಲಿ ಪ್ರಾಣಿಯ ಮೇಲೆ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪಿಎಎಲ್ (Pure Animal Lovers) ಫೌಂಡೇಶನ್ ಕಾರ್ಯಕರ್ತರು ಮತ್ತು ಮುಂಬೈ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಶೌಚಾಲಯದ ಬಾಗಿಲು ಬಡಿಯುತ್ತಿದ್ದರೂ ಒಳಗಿದ್ದ ವ್ಯಕ್ತಿ ಬಾಗಿಲು ತೆರೆಯಲು ನಿರಾಕರಿಸಿದ್ದಾನೆ. ನಂತರ ಪೊಲೀಸರು ಬಲವಂತವಾಗಿ ಒಳಪ್ರವೇಶಿಸಿದಾಗ ಆರೋಪಿಯ ವಿಕೃತ ಕೃತ್ಯ ಬಯಲಾಗಿದೆ.

ಆರೋಪಿಯ ಬಂಧನ:
ಘಟನಾ ಸ್ಥಳದಲ್ಲೇ ಅರೆಬೆತ್ತಲೆ ಸ್ಥಿತಿಯಲ್ಲಿದ್ದ ಕಾಮುಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಾಣಿ ಕಲ್ಯಾಣ ಸಂಸ್ಥೆಯು ಈ ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಆರೋಪಿಯ ಕ್ರೌರ್ಯದ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

‘ಭಾಗ್ಯಲಕ್ಷ್ಮಿ’ ಸುಷ್ಮಾ ರಾವ್ ರಹಸ್ಯ ಬಯಲು! ಪತಿ ಮತ್ತು ಮಗನನ್ನು ನೋಡಿ ಅಭಿಮಾನಿಗಳು ಅಚ್ಚರಿ

ನಾಯಿಮರಿಯ ಸ್ಥಿತಿ ಗಂಭೀರ:
ಕಾಮುಕನ ದೌರ್ಜನ್ಯಕ್ಕೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ನಾಯಿಮರಿಯನ್ನು ಕೂಡಲೇ ರಕ್ಷಿಸಿ ಪ್ರಾಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಾಯಿಮರಿ ವೈದ್ಯಕೀಯ ನಿಗಾದಲ್ಲಿದ್ದು, ಅದರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಆರೋಪಿಯ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆ ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories