Karnataka Civil Service : ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ವಯೋಮಿತಿ ಸಡಿಲಿಕೆ
Karnataka Civil Service : ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ರಾಜ್ಯದ ಎಲ್ಲಾ ವರ್ಗದ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಿದೆ.
ಈ ಮೊದಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ಹಾಗೂ ಎಸ್ಸಿಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿತ್ತು. ಆದರೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ಹೊಸ ನಿರ್ಧಾರದ ಪ್ರಕಾರ,ಐದು ವರ್ಷ ವಯೋಮಾನ ಏರಿಕೆ ಮಾಡಲಾಗಿದೆ.
Also Read : ESIC ನೇಮಕಾತಿ 2026 : 225 ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಈ ನಿರ್ಧಾರದ ಅನ್ವಯ ಸಾಮಾನ್ಯ ವರ್ಗದವರಿಗೆ 40 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43 ವರ್ಷ ಗರಿಷ್ಠ ವಯೋಮಿತಿ ಆಗಿರಲಿದೆ. ಅಂದಹಾಗೆ ಈ ನೂತನ ಆದೇಶವು 2027ರ ಡಿಸೆಂಬರ್ 31ರವರೆಗೆ ಚಾಲ್ತಿಯಲ್ಲಿ ಇರಲಿದೆ.
Also Read : ನಮ್ಮ ಮೆಟ್ರೋ ನೇಮಕಾತಿ 2026: ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ; ಇಲ್ಲಿ ಅರ್ಜಿ ಸಲ್ಲಿಸಿ
ಈ ಅವಧಿಯಲ್ಲಿ ನಡೆಯುವ ಸಿವಿಲ್ ಸೇವಾ ಹುದ್ದೆ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ವಯೋಮಿತಿ ಸಡಿಲಿಕೆಯ ಲಾಭವನ್ನು ಪಡೆಯಲಿದ್ದಾರೆ.
Age limit relaxation for Karnataka Civil Service posts



