ಕಾರ್ಕಳ–ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಸಾವು
ಉಡುಪಿ: ಕಾರ್ಕಳ–ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಮೀಯಾರು ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ತೂಫಾನ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಕಾರವಾರ: ವೈರಲ್ ವಿಡಿಯೋದಿಂದ ಮನನೊಂದು ಫಾರ್ಮಸಿ ಇನ್‌ಚಾರ್ಜ್ ಆತ್ಮಹತ್ಯೆ
ಮೃತರ ಗುರುತು ಹಾಗೂ ಅಪಘಾತಕ್ಕೆ ಕಾರಣವಾದ ನಿಖರ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



