ರಾಜೀವ್ ಪಿಕಳೆ ಆತ್ಮಹತ್ಯೆ ಕೇಸ್‌ನಲ್ಲಿ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ ಇಬ್ಬರ ಬಂಧನ
Karwar Rajiv Pickle Viral Video Suicide Case: ಕಾರವಾರ: ಜಿಲ್ಲೆಯ ಪ್ರತಿಷ್ಠಿತ ವೈದ್ಯಕೀಯ ಮನೆತನಕ್ಕೆ ಸೇರಿದ, ಫಾರ್ಮಸಿ ಇನ್‌ಚಾರ್ಜ್ ರಾಜೀವ್ ಪಿಕಳೆ ಅವರ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವೈದ್ಯರ ತೇಜೋವಧೆ ಮಾಡುವ ಉದ್ದೇಶದಿಂದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಆರೋಪದ ಮೇಲೆ ಅಂಕೋಲಾ ಪೊಲೀಸರು ಸುಭಾಷ್ ಮತ್ತು ಹರಿಶ್ಚಂದ್ರ ಎಂಬುವವರನ್ನು ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆ:
ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ವಾಸವಿದ್ದ ರಾಜೀವ್ ಪಿಕಳೆ ಅವರು ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕುಟುಂಬದವರು. ಇತ್ತೀಚೆಗೆ ಅವರು ರೋಗಿಯೊಬ್ಬರಿಗೆ ತಿಳಿಯದೇ ಅವಧಿ ಮೀರಿದ (Expired) ಮಾತ್ರೆ ನೀಡಿದ್ದರು ಎನ್ನಲಾದ ವಿಡಿಯೋವೊಂದು ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗಿತ್ತು. ಈ ವಿಚಾರವಾಗಿ ರಾಜೀವ್ ಪಿಕಳೆ ಅವರು ಬಹಿರಂಗವಾಗಿ ಕ್ಷಮೆಯನ್ನೂ ಕೇಳಿದ್ದರು. ಆದರೂ ಸಹ, ವಿಡಿಯೋ ಹರಡುವುದು ನಿಲ್ಲದಿದ್ದಾಗ ಮಾನಸಿಕವಾಗಿ ಜರ್ಜರಿತರಾಗಿದ್ದರು.
ಆತ್ಮಹತ್ಯೆಗೆ ಶರಣು:
ಜನರಲ್ಲಿ ತಮ್ಮ ಗೌರವಕ್ಕೆ ಕುಂದುಂಟಾಯಿತು ಎಂದು ನೊಂದ ರಾಜೀವ್ ಪಿಕಳೆ ಅವರು, ಜನವರಿ 23ರಂದು ತಮ್ಮ ನಿವಾಸದಲ್ಲಿ ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಅವರು ಬರೆದಿದ್ದ ಡೆತ್ ನೋಟ್‌ನಲ್ಲಿ, ತಮ್ಮ ಸಾವಿಗೆ ಬೇರೆ ಯಾರೂ ಕಾರಣವಲ್ಲ ಎಂದು ಬರೆದಿದ್ದರೂ, ಪೊಲೀಸರು ಕೂಲಂಕಷ ತನಿಖೆ ನಡೆಸಿದಾಗ ವಿಡಿಯೋ ವೈರಲ್ ಮಾಡಿದವರ ಕುಕೃತ್ಯ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶಿಕ್ಷಣ ಇಲಾಖೆಯಿಂದ ನಿಯಮ ಜಾರಿ : ಧ್ವಜಾರೋಹಣಕ್ಕೆ ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ
ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬರ ಸಣ್ಣ ತಪ್ಪನ್ನು ದೊಡ್ಡದು ಮಾಡಿ ಸಾರ್ವಜನಿಕವಾಗಿ ಅವಮಾನ ಮಾಡುವುದು ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಈ ಘಟನೆ ಕನ್ನಡಿ ಹಿಡಿದಿದೆ. ಸದ್ಯ ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



