ಪುತ್ತೂರು: ತಂದೆಗೆ ಚಾಕು ಇರಿದು ಮಗ ಆತ್ಮಹತ್ಯೆ; ರಾಮಕುಂಜದಲ್ಲಿ ಘೋರ ದುರಂತ!
Puttur Crime News: ಪುತ್ತೂರು: ತಂದೆ ಮತ್ತು ಮಗನ ನಡುವೆ ನಡೆದ ಜಗಳವೊಂದು ಅಂತಿಮವಾಗಿ ದುರಂತದಲ್ಲಿ ಅಂತ್ಯಗೊಂಡಿರುವ ಘಟನೆ ಪುತ್ತೂರಿನ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ನಡೆದಿದೆ. ತಂದೆಗೆ ಚಾಕು ಇರಿದ ಮಗ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆಯ ವಿವರ:
ಮೂಲತಃ ಕೇರಳದವರಾದ ವಸಂತ ಅಮೀನ್ ಎಂಬವರು ರಾಮಕುಂಜದ ಪಾದೆಯಲ್ಲಿ ಜಾಗ ಖರೀದಿಸಿ ವಾಸವಿದ್ದರು. ಶನಿವಾರ ಸಂಜೆ (ಜನವರಿ 24) ವಸಂತ ಅಮೀನ್ ಹಾಗೂ ಅವರ ಪುತ್ರ ಮೋಕ್ಷ ನಡುವೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ತೀವ್ರ ಜಗಳ ನಡೆದಿದೆ. ಈ ವೇಳೆ ಆವೇಶಕ್ಕೊಳಗಾದ ಮಗ ಮೋಕ್ಷ, ತಂದೆಗೆ ಚಾಕುವಿನಿಂದ ಇರಿದಿದ್ದಾನೆ.
ಇದನ್ನೂ ಓದಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಮಹಿಳಾ ಟೆಸ್ಟ್ ತಂಡ ಪ್ರಕಟ
ತಂದೆಯ ಮೇಲೆ ಹಲ್ಲೆ ನಡೆಸಿದ ಬೆನ್ನಲ್ಲೇ ತೀವ್ರ ಆತಂಕಕ್ಕೊಳಗಾದ ಮಗ, ಮನೆಯಲ್ಲಿದ್ದ ಕೋವಿಯಿಂದ ತನಗೆ ತಾನೇ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಿದೆ.



