ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ : ರಾಜ್ಯದಲ್ಲಿ ಮಳೆ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಎಂದಿನಂತೆ ಒಣಹವೆ ಮುಂದುವರಿಯಲಿದೆ. ಬೆಳಗ್ಗಿನ ಜಾವ ಚಳಿಯ ವಾತಾವರಣ ಇರಲಿದ್ದು ಬಳಿಕ ಮಧ್ಯಮ ಸೆಖೆ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮಳೆಯ ಸಾಧ್ಯತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾಯುಭಾರ ಕುಸಿತ ಪ್ರಭಾವದಿಂದಾಗಿ ರಾಜ್ಯದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1.6 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



