ಬೈಂದೂರು: ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು; ಆಹಾರ ನಿರೀಕ್ಷಕರಿಂದ ದಾಳಿ, 7.14 ಕ್ವಿಂಟಾಲ್ ಅಕ್ಕಿ ಜಪ್ತಿ

Anna Bhagya Rice Seized : ಬೈಂದೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದನ್ನು ಪತ್ತೆ ಹಚ್ಚುವಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಯಶಸ್ವಿ ಆಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಹರಕೇರಿ ಭರ್ಜರಿ ದಾಳಿ ನಡೆಸಿದ್ದಾರೆ.

ಬೈಂದೂರಿನ ಆಹಾರ ನಿರೀಕ್ಷಕರಾದ ವಿನಯ್ ಕುಮಾರ್ (49) ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಬಿಜೂರು ಗ್ರಾಮದ ಹರಕೇರಿ ನಿವಾಸಿ ಅಬ್ದುಲ್ ಬಿನ್ ಅಬ್ಬಾಸ್ ಎಂಬುವವರ ಮನೆಯಲ್ಲಿ ಸರ್ಕಾರದಿಂದ ಉಚಿತವಾಗಿ ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಕುಚ್ಚಲಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿತ್ತು.

ಜನವರಿ 30 ರಂದು ಬೆಳಿಗ್ಗೆ 09:40 ಗಂಟೆಗೆ ಪಂಚರ ಸಮಕ್ಷಮದಲ್ಲಿ ಅಧಿಕಾರಿಗಳು ದಾಳಿ ನಡೆಸಿದಾಗ, ಒಟ್ಟು 16 ಪಾಲಿಥಿನ್ ಚೀಲಗಳಲ್ಲಿ ತುಂಬಿಸಿಟ್ಟಿದ್ದ 7.14 ಕ್ವಿಂಟಾಲ್ ತೂಕದ ಕುಚ್ಚಲಕ್ಕಿ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ ರೂ. 16,422/- ಎಂದು ಅಂದಾಜಿಸಲಾಗಿದೆ.

Also Read : ನಕಲಿ ಕಾರ್ಡ್​ದಾರರಿಗೆ ಮತ್ತೊಂದು ಶಾಕ್​ : ಭಾರೀ ಮೊತ್ತದ ದಂಡ ವಿಧಿಸಲು ಸರ್ಕಾರದ ಪ್ಲಾನ್​

ಅಕ್ರಮ ಮಾರಾಟದ ಸಂಚು: ಆರೋಪಿ ಅಬ್ದುಲ್ ಬಿನ್ ಅಬ್ಬಾಸ್ ಉಚಿತವಾಗಿ ವಿತರಿಸುವ ಅಕ್ಕಿಯನ್ನು ಯಾರಿಂದಲೋ ಕಾನೂನು ಬಾಹಿರವಾಗಿ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಎನ್ನಲಾಗಿದೆ. ವಶಪಡಿಸಿಕೊಂಡ ಅಕ್ಕಿ ಚೀಲಗಳನ್ನು ಅಧಿಕಾರಿಗಳು ತಲ್ಲೂರು TAMPMC ಗೋಡಾಮಿಗೆ ರವಾನಿಸಿ ಸುರಕ್ಷಿತವಾಗಿ ಇರಿಸಿದ್ದಾರೆ.

Also Read : ಬ್ರಹ್ಮಾವರದಲ್ಲಿ ದ್ವೇಷ ಭಾಷಣ ಪ್ರಕರಣ: ಇಬ್ಬರ ಬಂಧನ…

ಪ್ರಕರಣ ದಾಖಲು: ಈ ಅಕ್ರಮಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 08/2026 ರಂತೆ, ಅತ್ಯಗತ್ಯ ವಸ್ತುಗಳ ಕಾಯ್ದೆ (Essential Commodities Act) ಕಲಂ 3, 6, ಹಾಗೂ 7 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Byndoor Food Inspector Raids Illegal Stock 7 Quintals of Anna Bhagya Rice Seized

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories