ಖ್ಯಾತ ಟಿವಿ ಜ್ಯೋತಿಷಿ ಕಮಲಾಕರ್‌ ಭಟ್‌ ಬಂಧನ; ಅಕ್ರಮ ಸಂಬಂಧದ ದೂರು ನೀಡಿದ್ದಕ್ಕೆ ಕೊಲೆ ಸಂಚು ಮಾಡಿದ್ರಾ ಗುರೂಜಿ?

Astrologer Kamalakar Bhat arrested: ಸಿದ್ದಾಪುರ (ಉತ್ತರ ಕನ್ನಡ): ಜ್ಯೋತಿಷ್ಯದ ಹೆಸರಿನಲ್ಲಿ ಜನಪ್ರಿಯರಾಗಿದ್ದ ಕಮಲಾಕರ್ ಭಟ್ ಅವರು ಈಗ ಕೊಲೆ ಸಂಚು ಮತ್ತು ಅನೈತಿಕ ಸಂಬಂಧದ ಆರೋಪದಡಿ ಜೈಲು ಪಾಲಾಗಿದ್ದಾರೆ. ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದ ಈ ಭೀಕರ ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿವಮೊಗ್ಗ ಮೂಲದ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರು ಸಿದ್ದಾಪುರದ ಸುಚಿತ್ರಾ ಎಂಬಾಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಷಯ ಸುಚಿತ್ರಾಳ ಮಗಳ ಮೂಲಕ ತಂದೆ ಮಹೇಶ್ ನಾಯ್ಕ್‌ಗೆ ತಿಳಿದಿದೆ. ತನ್ನ ಪತ್ನಿಯ ನಡವಳಿಕೆಯನ್ನು ಪ್ರಶ್ನಿಸಿದ ಮಹೇಶ್, ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನಿಂದ ಕೆರಳಿದ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ್ ಭಟ್, ಮಹೇಶ್‌ನನ್ನು ಮುಗಿಸಲು ಸ್ಕೆಚ್ ಹಾಕಿದ್ದಾರೆ.

ತಮ್ಮನ ರಕ್ಷಣೆಗೆ ಹೋದ ಅಣ್ಣನ ಸಾವು:

ಯೋಜನೆಯಂತೆ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಜ್ಯೋತಿಷಿಯ ಸಹಚರರು ಮಹೇಶ್ ನಾಯ್ಕ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಮ್ಮನನ್ನು ಕಾಪಾಡಲು ಓಡಿ ಬಂದ ಅಣ್ಣ ವಸಂತ್ ನಾಯ್ಕ್ ಅವರ ಮೇಲೆ ಹಂತಕರು ಬರ್ಬರವಾಗಿ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡ ವಸಂತ್ ನಾಯ್ಕ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಮಹೇಶ್ ಮತ್ತು ಕುಮಾರ್ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪದ ಸುಳಿವು : 3 ದಿನಗಳಿಂದ ವೈಮಾನಿಕ ಸಮೀಕ್ಷೆ

ಪೊಲೀಸ್ ಕಾರ್ಯಾಚರಣೆ ಮತ್ತು ಬಂಧನ:

ಕೊಲೆ ನಡೆದ ಕೇವಲ 24 ಗಂಟೆಗಳಲ್ಲಿ ಸಿದ್ದಾಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪ್ರಕರಣದ ಎ4 ಆರೋಪಿ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಒಟ್ಟು ಏಳು ಜನರನ್ನು ಬಂಧಿಸಿದ್ದಾರೆ.

ಬಂಧಿತ ಪ್ರಮುಖರು: ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ (ಮೃತ ವಸಂತ್ ನಾಯ್ಕ್ ಅವರ ತಮ್ಮನ ಪತ್ನಿ) ಮತ್ತು ಲೋಕನಾಥ್ ಚೌಡಪ್ಪ ನಾಯ್ಕ್.

ಪೊಲೀಸರು ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಜ್ಯೋತಿಷ್ಯದ ಮೂಲಕ ಪರಿಹಾರ ನೀಡಬೇಕಿದ್ದ ವ್ಯಕ್ತಿಯೇ ಕೊಲೆ ಸಂಚಿನಲ್ಲಿ ಭಾಗಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories