ಪುನೀತ್ ಕೆರೆಹಳ್ಳಿ, ವಸಂತ್ ಗಿಳಿಯಾರ್ ಮತ್ತು ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್ ದಾಖಲು

Puneeth Kerehalli | Vasanth Giliyar | Kiriki Keerthi: ಬೆಂಗಳೂರಿನ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ, ವಸಂತ ಗಿಳಿಯಾರ್ ಮತ್ತು ಕಿರಿಕ್ ಕೀರ್ತಿ ವಿರುದ್ಧ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ ಹಾಗೂ ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ನ್ಯಾಯಾಲಯದ ನಿರ್ದೇಶನದ ಮೇರೆಗೆ ಫೆಬ್ರವರಿ 2 ರಂದು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

​ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ ಎಂಬುವವರು ಈ ದೂರು ನೀಡಿದ್ದಾರೆ. ದೂರಿನ ಅನ್ವಯ, ಕಳೆದ ವರ್ಷ ಅಕ್ಟೋಬರ್ 9 ರಂದ ಸುದ್ದಿ ವಾಹಿನಿಯೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಹರೀಶ್ ಕುಮಾರ್ ಮತ್ತು ವಸಂತ ಗಿಳಿಯಾರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು.

​ಚರ್ಚೆ ಮುಗಿದ ನಂತರ, ವಸಂತ ಗಿಳಿಯಾರ್ ಅವರ ಪ್ರಚೋದನೆಯ ಮೇರೆಗೆ ಪುನೀತ್ ಕೆರೆಹಳ್ಳಿ ಬೆಂಬಲಿಗರು ಹರೀಶ್ ಕುಮಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಅಡಿಯಲ್ಲಿ ಶಾಂತಿ ಭಂಗಕ್ಕೆ ಪ್ರಚೋದನೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಕಲಂಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories