ಶೆಟ್ರಕಟ್ಟೆ ಬಸ್ ಅಪಘಾತಕ್ಕೆ ಒಳಗಾದ ವಿದ್ಯಾರ್ಥಿನಿಯರಿಗೆ ಕಾಲೇಜಿನಿಂದ ಸಹಾಯಧನ

ಉಡುಪಿ: ಶೆಟ್ರಕಟ್ಟೆ ಬಳಿ ನಡೆದ ಬಸ್ ಅಪಘಾತದಲ್ಲಿ ಗಾಯಗೊಂಡ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಚೈತ್ರಾ ಹಾಗೂ ಅರ್ಚನಾ ಅವರಿಗೆ ಕಾಲೇಜಿನ ವತಿಯಿಂದ ಆರ್ಥಿಕ ಸಹಾಯಧನ ನೀಡಲಾಗಿದೆ.
ಅಪಘಾತದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚಕ್ಕೆ ನೆರವಾಗುವ ಉದ್ದೇಶದಿಂದ ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕರು, ಅಧ್ಯಾಪಕರು, ಸಿಬ್ಬಂದಿ ವರ್ಗದವರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಒಟ್ಟಾಗಿ ರೂ.2,50,000 ಮೊತ್ತವನ್ನು ಸಂಗ್ರಹಿಸಿದ್ದಾರೆ. ಈ ಮೊತ್ತವನ್ನು ತಲಾ ರೂ.1,25,000ರಂತೆ ಇಬ್ಬರು ವಿದ್ಯಾರ್ಥಿನಿಯರ ಪೋಷಕರಿಗೆ ಕಾಲೇಜು ವತಿಯಿಂದ ಹಸ್ತಾಂತರಿಸಲಾಗಿದೆ.

ಇದನ್ನೂ ಓದಿ: ಸನ್ಮಾನದ ಗೌರವಧನ ಮೃತ ಪತ್ರಿಕಾ ವಿತರಕನ ಕುಟುಂಬಕ್ಕೆ ನೀಡಿ ಮಾನವೀಯತೆ ಮೆರೆದ ಸಮಾಜಸೇವಕ ವಿಶು ಶೆಟ್ಟಿ

ವಿದ್ಯಾರ್ಥಿನಿಯರ ಆರೋಗ್ಯ ಸುಧಾರಣೆಗಾಗಿ ಕಾಲೇಜು ಕುಟುಂಬ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಭರವಸೆ ನೀಡಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories