ರಾಜ್ಯದ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳು ಹಾಗೂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕಾರ್ಯ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಶೀಘ್ರದಲ್ಲೇ 2000 ಭೋದಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು ಉದ್ಯೋಗಾಕಾಂಕ್ಷಿಗಳ ಮೊಗದಲ್ಲಿ ಮಂದಹಾಸ ಮೂಡಿದೆ.
ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಒಟ್ಟು 2000 ಹುದ್ದೆಗಳ ಭರ್ತಿಗೆ ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಇದನ್ನೂ ಓದಿ: ಸೇನಾ ಅಗ್ನಿವೀರ್ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಪ್ರಾರಂಭ: ಯಾವ ಅರ್ಹತೆಯಿರಬೇಕು?
ತಾಂತ್ರಿಕ ಶಿಕ್ಷಣ ಇಲಾಖೆಯ ಈ ಮನವಿಗೆ ಸ್ಪಂದಿಸಿರುವ ಉನ್ನತ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಯ ಸಲಹೆಗಳನ್ನು ಆಧರಿಸಿ ನೇಮಕಾತಿಗೆ ಷರತ್ತು ಬದ್ದ ಅನುಮತಿ ನೀಡಿದೆ. ಈ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಅಡಿಯಲ್ಲಿ ಆಗತ್ಯ ವಿದ್ಯಾರ್ಹತೆ, ನೇಮಕಾತಿ ವಿಧಾನದಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ.



