PM Kisan Samman Nidhi update : ಪಿಎಂ ಕಿಸಾನ್ ಯೋಜನೆ ಬಗ್ಗೆ ಪಿಎಂ ಮೋದಿ ಮಹತ್ವದ ಹೇಳಿಕೆ

PM Kisan Samman Nidhi update: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 5 ರಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡುತ್ತಾ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮಹತ್ವವನ್ನು ವಿವರಿಸಿದರು.
ದೇಶದ ಸಣ್ಣ ಮತ್ತು ಅತಿಸಣ್ಣ ರೈತರನ್ನು ದಶಕಗಳ ಕಾಲ ನಿರ್ಲಕ್ಷಿಸಲಾಗಿತ್ತು ಎಂದು ಆರೋಪಿಸಿದ ಅವರು ನಮ್ಮ ಸರ್ಕಾರ ರೈತರ ಕಲ್ಯಾಣಕ್ಕೆ ಮೊದಲ ಆದ್ಯತೆ ನೀಡಿದೆ ಎಂದು ತಿಳಿಸಿದರು. ಈ ಯೋಜನೆಯು ಕೇವಲ ಆರ್ಥಿಕ ಸಹಾಯವಲ್ಲ ಬದಲಾಗಿ ರೈತರ ಆತ್ಮಗೌರವ ಮತ್ತು ಆತ್ಮನಿರ್ಭರತೆಯ ಸಂಕೇತವಾಗಿದೆ ಎಂದು ಅವರು ಒತ್ತಿ ಹೇಳಿದರು.
ಹಿಂದಿನ ಕಾಂಗ್ರೆಸ್ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಕಾಂಗ್ರೆಸ್ನ ನೀತಿಗಳು ಕೇವಲ ದೊಡ್ಡ ರೈತರು ಮತ್ತು ಪ್ರಭಾವಿ ವರ್ಗಕ್ಕೆ ಸೀಮಿತವಾಗಿದ್ದವು ಎಂದು ದೂರಿದರು. ಸಣ್ಣ ರೈತರು ಬೀಜ ಮತ್ತು ಗೊಬ್ಬರಕ್ಕಾಗಿ ಸಾಲಗಾರರನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇತ್ತು.
ಈ ಸಮಸ್ಯೆಗಳನ್ನು ಹೋಗಲಾಡಿಸಲು ಕೇಂದ್ರ ಸರ್ಕಾರವು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವ ವ್ಯವಸ್ಥೆ ಜಾರಿಗೆ ತಂದಿದೆ. ಇಲ್ಲಿಯವರೆಗೆ ಸುಮಾರು ನಾಲ್ಕು ಲಕ್ಷ ಕೋಟಿ ರೂಪಾಯಿಗಳನ್ನು ರೈತರ ಖಾತೆಗಳಿಗೆ ಯಶಸ್ವಿಯಾಗಿ ವರ್ಗಾಯಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ನಾಸಾದಲ್ಲಿ ಕೆಲಸ ಮಾಡುವ ಆಸೆಯೇ? ಕಾಲೇಜು ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ!
ಪಿಎಂ ಕಿಸಾನ್ ಯೋಜನೆ (PM Kisan Samman Nidhi update ) ಯಡಿ ಅರ್ಹ ರೈತರಿಗೆ ವಾರ್ಷಿಕ 6,000 ರೂಪಾಯಿಗಳನ್ನು ತಲಾ 2,000 ರೂಪಾಯಿಯಂತೆ ಮೂರು ಕಂತುಗಳಲ್ಲಿ ನೀಡಲಾಗುತ್ತಿದೆ. ಈ ಯೋಜನೆಯು ರೈತರಿಗೆ ಆರ್ಥಿಕ ಭದ್ರತೆ ನೀಡುವುದಲ್ಲದೆ ಅವರು ಸಂಕಷ್ಟದ ಸಮಯದಲ್ಲಿ ಧೈರ್ಯವಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ನೆರವಾಗುತ್ತಿದೆ. ಮುಂದಿನ ದಿನಗಳಲ್ಲಿ ಕೃಷಿಯನ್ನು ಆಧುನೀಕರಿಸಲು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.


