ಕುಂದಾಪುರ : ಕೃಷಿ ಭೂಮಿಗೆ ಅಂಬ್ಯುಲೆನ್ಸ್‌ ಇಳಿಸಿ ವ್ಯಕ್ತಿಯ ಜೀವ ರಕ್ಷಣೆ

Kundapura Uppinakudru Ambulance : ಕುಂದಾಪುರ : ಅಂಬ್ಯುಲೆನ್ಸ್‌ ಅನ್ನು ಕೃಷಿ ಭೂಮಿಗೆ ಇಳಿಸಿ ರೋಗಿಯ ಪ್ರಾಣ ರಕ್ಷಣೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಉಪ್ಪಿಕುದ್ರು ಎಂಬಲ್ಲಿ ನಡೆದಿದೆ.

ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಉಪ್ಪಿನ ಕುದ್ರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದೆ. ಇಲ್ಲಿನ ಕಳುವಿನ ಬಾಗಿಲು ಪ್ರದೇಶದಲ್ಲಿ ಸುಮಾರು 35 ಕುಟುಂಬಗಳು ವಾಸಿಸುತ್ತಿದ್ದು, ಮೂಲ ಸೌಕರ್ಯವಿಲ್ಲದೇ ಜನರು ಪರದಾಡುತ್ತಿದ್ದಾರೆ.

ಇತ್ತೀಚೆಗೆ ಗ್ರಾಮಸ್ಥರೊಬ್ಬರಿಗೆ ಹೃದಯಾಘಾತ ಉಂಟಾಗಿತ್ತು. ರಸ್ತೆ ಸಂಪರ್ಕವಿಲ್ಲದೇ ಕುಟುಂಬ ಗೋಳಾಡಿದೆ. ನಂತರ ಬೆಳೆ ಬೆಳೆದ ಗದ್ದೆಗೆ ಅಂಬ್ಯುಲೆನ್ಸ್‌ ಇಳಿಸಿ ಹರಸಾಹಸ ಬಿಟ್ಟು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗದ್ದೆಯಲ್ಲಿ ಅಂಬ್ಯುಲೆನ್ಸ್‌ ಸಂಚರಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Also Read : ಧರ್ಮಸ್ಥಳದ ಭಕ್ತಾದಿಗಳ ಗಮನಕ್ಕೆ : ವಸತಿ ಗೃಹಗಳ ಬುಕ್ಕಿಂಗ್​ ನೆಪದಲ್ಲಿ ಸೈಬರ್​ ವಂಚನೆ, ಆಡಳಿತ ಮಂಡಳಿಯಿಂದ ಎಚ್ಚರಿಕೆ

ಇಲ್ಲಿನ ನಿವಾಸಿಗಳು ಕನಿಷ್ಠ ಮೂಲ ಸೌಕರ್ಯ ಒದಗಿಸುವಂತೆ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ರೂ ಪ್ರಯೋಜನವಾಗಿಲ್ಲ. ಇಲ್ಲಿ ವಾಸಿಸುವ 300ಕ್ಕೂ ಅಧಿಕ ಜನರು ನರಕ ಸದೃಶ ಬದುಕು ಸಾಗಿಸುತ್ತಿದ್ದಾರೆ.

ಒಂದೊಮ್ಮೆ ಇಲ್ಲಿನ ನಿವಾಸಿಗಳು ಅನಾರೋಗ್ಯಕ್ಕೆ ತುತ್ತಾದ್ರೆ, ಆಸ್ಪತ್ರೆಗೆ ಸಾಗಿಸಲು ಹರಸಾಹಸ ಪಡಬೇಕಾಗಿದೆ. ಒಂದೊಮ್ಮೆ ಯಾರಾದ್ರೂ ಮೃತಪಟ್ಟರೂ ಕೂಡ ಈ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲು ಕೂಡ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲ.

Also Read : ಕುಂದಾಪುರ: ಫಾರ್ಚುನರ್ ಕಾರು ಪಲ್ಟಿ – ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ವಿಡಿಯೋ ಕುರಿತು ಆಕ್ರೋಶ ವ್ಯಕ್ತವಾಗುತ್ತಿದೆ. ಮಾನವೀಯತೆಯನ್ನೇ ಮರೆತಿರುವ ವ್ಯವಸ್ಥೆಯ ವಿರುದ್ದ ಜನರು ಹಿಡಿಶಾಪ ಹಾಕುತ್ತಿದ್ದಾರೆ.

Kundapura Uppinakudru Ambulance travel agricultural land, saving a person’s life

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories