Good news for job seekers: ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​ : ಪ್ರಸಕ್ತ ಸಾಲಿನಲ್ಲಿ 8 ಸಾವಿರ ಸರ್ಕಾರಿ ಶಿಕ್ಷಕರ ನೇಮಕಕ್ಕೆ ಆದೇಶ

Good news for job seekers: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶತಾಯಗತಾಯ ದಾಖಲಾತಿ ಹೆಚ್ಚಳ ಮಾಡಲು ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಈಗಾಗಲೇ ನಾನಾ ಕ್ರಮಗಳನ್ನು ಕೈಗೊಂಡಿದೆ. ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಕರ್ನಾಟಕ ಪಬ್ಲಿಕ್​ ಸ್ಕೂಲ್​ಗಳ ನಿರ್ಮಾಣ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ, ನೋಟ್​ಬುಕ್​, ಪುಸ್ತಕ, ಸಮವಸ್ತ್ರಗಳ ಉಚಿತ ವಿತರಣೆ, ಶಾಲಾ ಬಸ್​ ಸೌಕರ್ಯ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಶಿಕ್ಷಕರ ನೇಮಕಾತಿಗೂ ಮುಂದಾಗಿದೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ(Madhu Bangarappa), ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ 7 ರಿಂದ 8 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಸಂಗೀತ ಹಾಗೂ ದೈಹಿಕ ಶಿಕ್ಷಕ ವಿಭಾಗದ ಶಿಕ್ಷಕರ ನೇಮಕಾತಿಯೂ ನಡೆಯಲಿದೆ ಎಂದಿದ್ದಾರೆ.

Also Read: ಬಿಜೆಪಿ ಮುಖಂಡನಿಗೆ ಸಚಿವ ಸ್ಥಾನ ನೀಡಿದ ಸಿಎಂ ಸಿದ್ದರಾಮಯ್ಯ ಸರ್ಕಾರ !

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ನಮ್ಮ ಉದ್ದೇಶವಾಗಿದೆ. ಇದು ಮಾತ್ರವಲ್ಲ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುವುದು ಕೂಡ ಮುಖ್ಯ. ಈಗಾಗಲೇ ಕೆಪಿಎಸ್​ ಶಾಲೆಗಳಿಗೆ ಉತ್ತಮ ಸ್ಪಂದನೆ ದೊರಕಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕ ಪಬ್ಲಿಕ್​ ಶಾಲೆಗಳನ್ನು ತೆರೆಯುವುದಾಗಿ ಮಾಹಿತಿ ನೀಡಿದ್ದಾರೆ.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories