ಕೇಂದ್ರ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಭರ್ಜರಿ ಸಂಬಳ, ಭಾರೀ ಬೋನಸ್

NCL Recruitment 2026: ಕೇಂದ್ರ ಸರ್ಕಾರದ ಅಧೀನದ ಕೋಲ್ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆಯಾದ ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL), ತಾಂತ್ರಿಕ ಹಿನ್ನೆಲೆಯುಳ್ಳ ಯುವಜನತೆಗಾಗಿ ಭರ್ಜರಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಒಟ್ಟು 270 ಸಹಾಯಕ ಫೋರ್‌ಮ್ಯಾನ್ (ತರಬೇತಿ) ಗ್ರೇಡ್–C ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಮುಖ್ಯವಾಗಿ ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳಲ್ಲಿ ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಮಾಡಿದವರಿಗೆ ಸೀಮಿತವಾಗಿದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ:
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು ಹುದ್ದೆಗಳನ್ನು ಮೂರು ಪ್ರಮುಖ ತಾಂತ್ರಿಕ ವಿಭಾಗಗಳಾಗಿ ವಿಂಗಡಿಸಲಾಗಿದೆ. ಎಲೆಕ್ಟ್ರಿಕಲ್ ವಿಭಾಗದಲ್ಲಿ ಅತಿ ಹೆಚ್ಚು ಅಂದರೆ 148 ಹುದ್ದೆಗಳಿದ್ದು, ಮೆಕ್ಯಾನಿಕಲ್ ವಿಭಾಗದಲ್ಲಿ 108 ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ದೂರಸಂಪರ್ಕ (E&T) ವಿಭಾಗದಲ್ಲಿ 14 ಹುದ್ದೆಗಳಿವೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪಾಸಾಗಿರಬೇಕು ಮತ್ತು ಸಂಬಂಧಿತ ವಿಷಯದಲ್ಲಿ ಕನಿಷ್ಠ ಮೂರು ವರ್ಷದ ಡಿಪ್ಲೊಮಾ ಅಥವಾ ಬಿ.ಇ/ಬಿ.ಟೆಕ್ ಪದವಿ ಹೊಂದಿರಬೇಕು.

ವಯೋಮಿತಿ ಮತ್ತು ವೇತನ ಶ್ರೇಣಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು (ಮಾರ್ಚ್ 5, 2026ಕ್ಕೆ ಅನ್ವಯವಾಗುವಂತೆ). ಸರ್ಕಾರದ ನಿಯಮದಂತೆ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹47,330 ಮೂಲ ವೇತನ ದೊರೆಯಲಿದ್ದು, ಇದರೊಂದಿಗೆ ತುಟ್ಟಿ ಭತ್ಯೆ (DA), ಮನೆ ಬಾಡಿಗೆ ಭತ್ಯೆ (HRA) ಮತ್ತು ಹಾಜರಾತಿ ಬೋನಸ್ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ.

ಶರಾವತಿ ಪಂಪ್ಡ್​ ಸ್ಟೋರೇಜ್​ಗೆ ಒಪ್ಪಿಗೆ ಇಲ್ಲ : ಜೀವ ವೈವಿಧ್ಯತೆಯ ರಕ್ಷಣೆಯೇ ನಮ್ಮ ಆದ್ಯತೆ ಎಂದ ಕೇಂದ್ರ

ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳನ್ನು 100 ಅಂಕಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯಲ್ಲಿ 70 ಪ್ರಶ್ನೆಗಳು ತಾಂತ್ರಿಕ ವಿಷಯಕ್ಕೆ ಸಂಬಂಧಿಸಿದ್ದರೆ, ಉಳಿದ 30 ಪ್ರಶ್ನೆಗಳು ಸಾಮಾನ್ಯ ಜ್ಞಾನ ಮತ್ತು ತಾರ್ಕಿಕ ಸಾಮರ್ಥ್ಯದ ಮೇಲೆ ಇರುತ್ತವೆ. ಪರೀಕ್ಷೆಯಲ್ಲಿ ಯಾವುದೇ ಋಣಾತ್ಮಕ ಅಂಕಗಳು (Negative Marks) ಇರುವುದಿಲ್ಲ ಎಂಬುದು ಅಭ್ಯರ್ಥಿಗಳಿಗೆ ಪ್ಲಸ್ ಪಾಯಿಂಟ್. ಆಸಕ್ತರು ಫೆಬ್ರವರಿ 11 ರಿಂದ ಮಾರ್ಚ್ 5, 2026 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹1,180 ಅರ್ಜಿ ಶುಲ್ಕವಿದ್ದು, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories