ಶಾಲೆಗಳಲ್ಲಿ ವಿದ್ಯಾರ್ಥಿಗಳು ತರಗತಿಗಳನ್ನು ತಪ್ಪಿಸಿಕೊಳ್ಳುವುದನ್ನು ತಡೆಯಲು ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಫೇಸ್ ರಿಕಗ್ನೈಶನ್ ಹಾಜರಾತಿ ಕಡ್ಡಾಯಗೊಳಿಸಲಾಗಿದ್ದು, ಎಐ ಆಧಾರಿತ ಈ ಹಾಜರಾತಿ ಪ್ರಕ್ರಿಯೆ ಮೂಲಕ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಾಗುತ್ತದೆ. ಈ ಬಾರಿಯ ಶೈಶಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಯಾಗುತ್ತಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ನಿಯಮವನ್ನು ಕಡ್ಡಾಯವ ಮಾಡಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಬರೋಬ್ಬರಿ 2.16 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ. ಮೇ ತಿಂಗಳ ಒಳಗಾಗಿ ಎಐ ಮೊಬೈಲ್ ಆ್ಯಪ್ ಅನುಷ್ಠಾನಗೊಳಿಸುವಂತೆ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ತಂತ್ರಜ್ಞಾನದ ಅಡಿಯಲ್ಲಿ ಪೋಷಕರು ಕೂಡ ತಮ್ಮ ಮಕ್ಕಳ ಹಾಜರಾತಿಯ ಮೇಲೆ ನಿಗಾ ಇಡಲು ಸಾಧ್ಯವಾಗಲಿದೆ.
ಇದನ್ನೂ ಓದಿ: CBSE 10ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೊದಲ ಬೋರ್ಡ್ ಪರೀಕ್ಷೆ ಇನ್ನು ಕಡ್ಡಾಯ!
ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಶಿಕ್ಷಕರಿಗೂ ಇದೇ ಮಾದರಿಯ ಹಾಜರಾತಿ ಪ್ರಕ್ರಿಯೆ ಜಾರಿಗೆ ಬರಲಿದೆ. ಹೀಗಾಗಿ ಮೊದಲು ಶಿಕ್ಷಕ ಈ ಆ್ಯಪ್ನ ಮೂಲಕ ತನ್ನ ಹಾಜರಾತಿ ಹಾಕಿಕೊಂಡ ಬಳಿಕವೇ ವಿದ್ಯಾರ್ಥಿಗಳ ಹಾಜರಾತಿ ಹಾಕಲು ಸಾಧ್ಯವಿದೆ. ಇದರಿಂದ ಯಾರಿಗೂ ಇನ್ಮುಂದೆ ಕಳ್ಳಾಟವಾಡಲು ಸಾಧ್ಯವಿಲ್ಲ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.



