ರಾಜ್ಯದಲ್ಲಿ ಬಹುದೊಡ್ಡ ಸಂಚಲನಕ್ಕೆ ಕಾರಣವಾಗಿದ್ದ ಕೋಗಿಲು ಲೇಔಟ್ ನಿರಾಶ್ರಿತರಿಗೆ ರಾಜ್ಯ ಸರ್ಕಾರದಿಂದ ಬಿಗ್ಶಾಕ್ ಎದುರಾಗಿದೆ. ಅಕ್ರಮ ನಿವಾಸಿಗಳಿಗೆ ಮನೆ ನೀಡುವ ವಿಚಾರದಲ್ಲಿ ಭಾರೀ ಹುಮ್ಮಸ್ಸು ತೋರಿದ್ದ ರಾಜ್ಯ ಸರ್ಕಾರ ಬಳಿಕ ಯು ಟರ್ನ್ ಹೊಡೆದಿದೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಯಾರಿಗೂ ಮನೆ ಕೊಡಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಕೋಗಿಲು ಲೇಔಟ್ ನಿವಾಸಿಗಳ ಕಣ್ಣು ಕೆಂಪಗಾಗಿಸಿದೆ.
ಈ ವಿಚಾರವಾಗಿ ಸ್ಲಂ ನಿವಾಸಿಗಳ ಹೋರಾಟ ಸಮಿತಿ ಸಂಚಾಲಕಿ ಗೌರಮ್ಮ ಮಾತನಾಡಿದ್ದು, ಹೊಸ ವರ್ಷಕ್ಕೆ ಕೋಗಿಲೆ ಲೇಔಟ್ ನಿವಾಸಿಗಳಿಗೆ ಮನೆ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ ವಿಪಕ್ಷಗಳು ಸುಳ್ಳು ಆರೋಪಗಳನ್ನು ಹೊರಿಸಿತ್ತು. ಮೊದಲ ಹಂತದಲ್ಲಿ 26 ಕುಟುಂಬಗಳಿಗೆ ಮನೆ ಸಿಗಬೇಕಿತ್ತು. ಆದರೆ ಈಗ ಮನೆಯೂ ಇಲ್ಲ, ನಿವೇಶನವೂ ಇಲ್ಲ ಎಂಬಂತಾಗಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಬಣದಿಂದ ವಿದೇಶಿ ಪ್ರವಾಸ : ನಮ್ಮ ದುಡ್ಡು ನಮ್ಮಿಷ್ಟ ಎಂದ ‘ಕೈ’ ನಾಯಕರು
ಇಲ್ಲಿನ ನಿವಾಸಿಗಳಿಗೆ ಮನೆ ಕೊಡಿಸುವ ವಿಚಾರದಲ್ಲಿ ಸಚಿವರಾದ ಕೃಷ್ಣಬೈರೇಗೌಡ ಹಾಗೂ ಜಮೀರ್ ಅಹಮದ್ ಖಾನ್ ಸಕಾರಾತ್ಮಕ ಸ್ಪಂದನೆ ನೀಡಿದ್ದರು. ಆದರೆ ಮನೆ ಕೆಡವಿ ಹಲವು ತಿಂಗಳೇ ಕಳೆದರೂ ಮನೆ ಮಾತ್ರ ಸಿಗುತ್ತಿಲ್ಲ. ಸರ್ಕಾರ ಕೊಟ್ಟ ಮಾತನ್ನು ತಪ್ಪಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.



