ಉಡುಪಿ: ಅಂಬಾಗಿಲು ಬಳಿ ಭೀಕರ ಅಪಘಾತ; ಒನ್‌ವೇಯಲ್ಲಿ ಬಂದ ಬಸ್ ಚಾಲಕ ಬಲಿ, ಮತ್ತೋರ್ವ ಗಂಭೀರ

Udupi ambagilu Road Accident : ಉಡುಪಿ : ಸಂಚಾರಿ ನಿಯಮ ಉಲ್ಲಂಘಿಸಿ ಏಕಮುಖ ಸಂಚಾರದ ರಸ್ತೆಯಲ್ಲಿ (One-way) ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರನೋರ್ವ ಅಪಘಾತದಲ್ಲಿ ಮೃತಪಟ್ಟ ಘಟನೆ ಉಡುಪಿಯ ಶಿವಳ್ಳಿ ಗ್ರಾಮದ ಅಂಬಾಗಿಲು-ಪೆರಂಪಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಸಿಟಿ ಬಸ್ ಚಾಲಕ ಸಂದೀಪ್ ಎಂದು ಗುರುತಿಸಲಾಗಿದೆ. ಸಂದೀಪ್ ಬಸ್‌ ಚಾಲಕನಾಗಿದ್ದು, ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಎದುರಿನ ಒನ್‌ವೇ ರಸ್ತೆಯಲ್ಲಿ ನಿಯಮ ಬಾಹಿರವಾಗಿ ಬೈಕ್‌ ಚಲಾಯಿಸಿಕೊಂಡು ಬಂದಿದ್ದಾನೆ. ಈ ವೇಳೆಯಲ್ಲಿ ರಸ್ತೆಯಲ್ಲಿ ಬರುತ್ತಿದ್ದ ದೇವೇಂದ್ರ ಶೆಣೈ ಎಂಬುವವರ ಬೈಕ್‌ ಗೆ ಸಂದೀಪ್‌ ಬೈಕ್‌ ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ.

Udupi ambagilu Road Accident Bus Driver Dead One way traffic Voilation Kannada News

Also Read : ಶಾಸಕ ಗುರುರಾಜ ಘಂಟಿಹೊಳೆ ಗ್ರಾಮ ವಾಸ್ತವ್ಯ: ಕೊರಗ ಸಮುದಾಯದ ಮನೆಯಲ್ಲಿ ಸಾಮಾಜಿಕ ಸಾಮರಸ್ಯದ ಸಂದೇಶ!

ಡಿಕ್ಕಿಯ ರಭಸಕ್ಕೆ ಸಂದೀಪ್ ಅವರು ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಇನ್ನು ಬೈಕ್‌ ಚಾಲಕ ದೇವೆಂದ್ರ ಶೆಣೈ ಅವರ ಖಾಲಿಗೆ ಬಲವಾದ ಪೆಟ್ಟು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read : ತೆಕ್ಕಟ್ಟೆ : ಆನ್​ಲೈನ್​ ಸರ್ವೀಸ್​ ಸೆಂಟರ್​ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಭಸ್ಮ

ನಿರ್ಲಕ್ಷ್ಯ ಬಸ್‌ ಚಾಲಕ ಬಲಿ

ಸಂದೀಪ್ ಅವರು ಏಕಮುಖ ಸಂಚಾರದ ರಸ್ತೆಯಲ್ಲಿ ಅತೀ ವೇಗ ಮತ್ತು ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Udupi ambagilu Road Accident Bus Driver Dead One way traffic Voilation Kannada News

Ashwath Acharya | ಅಶ್ವಥ್ ಆಚಾರ್ಯ

ನ್ಯೂಸ್‌ ನೆಕ್ಸ್ಟ್‌ನ ಹಿರಿಯ ವರದಿಗಾರರಾಗಿರುವ ಅಶ್ವಥ್‌ ಆಚಾರ್ಯ ಅವರು ಪತ್ರಕರ್ತರಾಗಿ ಸುಮಾರು 20 ವರ್ಷಗಳ ಅನುಭವ ಹೊಂದಿದ್ದಾರೆ. ಕರ್ನಾಟಕದ ಪ್ರಖ್ಯಾತ ಸುದ್ದಿವಾಹಿನಿ, ಕನ್ನಡ ಪ್ರತಿಷ್ಠಿತ ದಿನ ಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. More »

Related Stories