ಪುತ್ತೂರು : ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ನರಿಮೊಗರು ಎಂಬಲ್ಲಿ ನಡೆದಿದೆ.

ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ಮಿಥುನ್(18) ವರ್ಷ) ಹಾಗೂ ಭವಿತ್ (19 ವರ್ಷ) ಮೃತ ದುರ್ದೈವಿಗಳು .
ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮಕ್ಕೆ ತರಳಿದ್ದ ಮಿಥುನ್, ಭವಿತ್ ಸಹೋದರರು ಬೈಕ್ನಲ್ಲಿ ವಾಪಾಸಾಗುತ್ತಿದ್ದರು.

ಈ ವೇಳೆಯಲ್ಲಿ ಎದುರಿನಿಂದ ಬಂದ ಕಾರು ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ಸೇರಿದಂತೆ ಇಬ್ಬರ ತೆಲೆಗೆ ತೀವ್ರ ತರಹದ ಗಾಯವಾಗಿದ್ದು, ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೃತ ಮಿಥುನ್ ನರಿಮೊಗ್ರು ಐಟಿಐ ವಿದ್ಯಾರ್ಥಿಯಾಗಿದ್ದರೆ, ಭವಿತ್ ಅವರು ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು.

ಮೃತದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಠಾಣೆಯ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.


