ಇಸ್ರೋ ‘ಯುವಿಕಾ-2026’ ಉಚಿತ ತರಬೇತಿ: ಈ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ISRO YUVIKA 2026 Applications: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶಾಲಾ ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಹಮ್ಮಿಕೊಳ್ಳುವ ‘ಯುವ ವಿಜ್ಞಾನಿ ಕಾರ್ಯಕ್ರಮ’ ಅಥವಾ ಯುವಿಕಾ (YUVIKA) – 2026 ರ ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ವೇದಿಕೆಯಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಜನವರಿ 1, 2026 ರ ವೇಳೆಗೆ ದೇಶದ ಯಾವುದೇ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ ಹೇಗೆ?

ವಿದ್ಯಾರ್ಥಿಗಳ ಆಯ್ಕೆಯನ್ನು ವಿವಿಧ ಮಾನದಂಡಗಳ ಆಧಾರದ ಮೇಲೆ ಮಾಡಲಾಗುತ್ತದೆ:

  • ಅಂಕಗಳು: 8ನೇ ತರಗತಿಯಲ್ಲಿ ಪಡೆದ ಅಂಕಗಳಿಗೆ ಶೇ. 50 ರಷ್ಟು ಆದ್ಯತೆ.
  • ಆನ್‌ಲೈನ್ ಕ್ವಿಜ್: ಆನ್‌ಲೈನ್‌ನಲ್ಲಿ ನಡೆಸುವ ರಸಪ್ರಶ್ನೆಗೆ ಶೇ. 10 ರಷ್ಟು ಆದ್ಯತೆ.
  • ಗ್ರಾಮೀಣ ವಿದ್ಯಾರ್ಥಿಗಳಿಗೆ ವಿನಾಯಿತಿ: ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಶೇ. 15 ರಷ್ಟು ವೇಟೇಜ್ ನೀಡಲಾಗುತ್ತದೆ.
  • ಇತರ ಚಟುವಟಿಕೆ: ವಿಜ್ಞಾನ ಪ್ರದರ್ಶನ, ಕ್ರೀಡೆ, ಒಲಿಂಪಿಯಾಡ್, ಎನ್‌ಸಿಸಿ (NCC), ಸ್ಕೌಟ್ಸ್ ಮತ್ತು ಗೈಡ್ಸ್ ಭಾಗವಹಿಸುವಿಕೆಗೂ ಅಂಕಗಳನ್ನು ನೀಡಲಾಗುತ್ತದೆ.

ಕಾರ್ಯಕ್ರಮದ ವಿಶೇಷತೆಗಳು:

ಪ್ರಮುಖ ದಿನಾಂಕಗಳು:

  • ನೋಂದಣಿ ಆರಂಭ: ಫೆಬ್ರವರಿ 27, 2026.
  • ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 31, 2026.
  • ಮೊದಲ ಆಯ್ಕೆ ಪಟ್ಟಿ ಪ್ರಕಟ: ಏಪ್ರಿಲ್ 13, 2026.
  • ಕಾರ್ಯಕ್ರಮದ ಅವಧಿ: ಮೇ 11 ರಿಂದ ಮೇ 22, 2026.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories