ಮಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ; ಅಕ್ರಮವಾಗಿ ಸಾಗಿಸುತ್ತಿದ್ದ 24 ಹಸುಗಳ ರಕ್ಷಣೆ

Mangaluru News | Mangalore News | cow illegal transportation: ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದವರ ಬಗ್ಗೆ ಖಚಿತ ಮಾಹಿತಿ ಆಧರಿಸಿದ ಮಂಗಳೂರಿನ ಕದ್ರಿ ಠಾಣಾ ಪೊಲೀಸರು ದಾಳಿ ನಡೆಸಿ 34 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ.

ಜಾನುವಾರು ಸಾಗಾಟ ಮಾಡುತ್ತಿದ್ದವರ ಬಗ್ಗೆ ಕದ್ರಿ ಪೊಲೀಸರು ಖಚಿತ ಮಾಹಿತಿ ಪಡೆದುಕೊಂಡಿದ್ದರು. ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಜಾನುವಾರುಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ಈ ಎಲ್ಲಾ ಹಸುಗಳನ್ನು ಕೇರಳದ ಕಸಾಯಿಖಾನೆಗೆ ಸಾಗಿಸಲು ಆರೋಪಿಗಳು ಪ್ಲಾನ್​ ಮಾಡಿದ್ದರು ಎನ್ನಲಾಗಿದೆ.

ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಮತ್ತಷ್ಟು ಸುಲಭ; ಆನ್​ಲೈನ್​ನಲ್ಲೇ ಸಿಗಲಿದೆ ಮಾಹಿತಿ

ಈ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೈಸೂರಿನ ದಸ್ತಗೀರ ಸಾಬ್​, ಖತೀಫ್​ ಪಾಷಾ, ಅಯೂಬ್​ ಖಾನ್​ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದಿಂದ ಕೇರಳದ ಹೊಸಂಗಡಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದರು ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಈ ಸಂಬಂಧ ಕದ್ರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories