ಸರ್ಕಾರದ ವಿರುದ್ಧ ವೈದ್ಯರ ಸಮರ : ಮಾರ್ಚ್​ 11ರಂದು ರಾಜ್ಯಾದ್ಯಂತ ವೈದ್ಯರ ಮುಷ್ಕರ

ವೇತನ ಹಿಂಬಾಕಿ ಪಾವತಿಗೆ ಆಗ್ರಹಿಸಿ ಸಾರಿಗೆ ಇಲಾಖೆಯ ಸಿಬ್ಬಂದಿ ಸರ್ಕಾರದ ವಿರುದ್ಧ ಮುಷ್ಕರ ನಡೆಸಿದ ಬೆನ್ನಲ್ಲೇ ಇದೀಗ ವೈದ್ಯರು ಕೂಡ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲು ಸಜ್ಜಾಗಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಮುಷ್ಕರ ನಡೆಸಲು ವೈದ್ಯರ ಸಂಘ ತೀರ್ಮಾನಿಸಿದೆ.
ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘವು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದೆ. ಮಾರ್ಚ್ 11ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಈ ದಿನಾಂಕದಂದು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಕೇಂದ್ರ, ತಾಲೂಕಾಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ವೈದ್ಯರುಗಳು ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸಲಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಆಂಬುಲೆನ್ಸ್​ನಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ ಗರ್ಭಿಣಿ!

ಈ ದಿನಾಂಕದಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆಗಳು ಬಂದ್​ ಆಗುವ ಸಾಧ್ಯತೆಗಳು ದಟ್ಟವಾಗಿದ್ದು ರಾಜ್ಯದಲ್ಲಿ ಬಡರೋಗಿಗಳ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗಲಿದೆ. ಮುಷ್ಕರಕ್ಕೂ ಮುನ್ನವೇ ರಾಜ್ಯ ಸರ್ಕಾರ ವೈದ್ಯರ ಬೇಡಿಕೆಗಳನ್ನು ಈಡೇರಿಸಿ ಅಸಮಾಧಾನ ಶಮನ ಮಾಡುತ್ತಾ ಇಲ್ಲವೇ ರಾಜ್ಯದಲ್ಲಿ ಹೆಲ್ತ್​ ಎಮರ್ಜೆನ್ಸಿಗೆ ದಾರಿ ಮಾಡುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories