ರಾಜ್ಯದಲ್ಲಿ ಮಿತಿಮೀರಿದ ಬಿರು ಬೇಸಿಲ ಬೇಗೆ : ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಝಳ ಹೆಚ್ಚುತ್ತಲೇ ಇದ್ದು ಜನಸಾಮಾನ್ಯರು ಹೈರಾಣಾಗಿದ್ದಾರೆ. ಅಧಿಕೃತವಾಗಿ ಬೇಸಿಗೆ ಆರಂಭಕ್ಕೂ ಮುನ್ನವೇ ತಾಪಮಾನ ಮಿತಿಮೀರಿದ್ದು ಏಪ್ರಿಲ್ – ಮೇ ಅವಧಿಯಲ್ಲಿ ಪರಿಸ್ಥಿತಿ ಏನಾಗಬಹುದು ಎಂಬ ಆತಂಕದಲ್ಲಿದ್ದಾರೆ. ಈ ಎಲ್ಲದರ ನಡುವೆ ಮುಂದಿನ 48 ಗಂಟೆಗಳಲ್ಲಿ ತಾಪಮಾನ ಮತ್ತಷ್ಟು ಮಿತಿಮೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕರ್ನಾಟಕದ ಕಲಬುರಗಿ, ಬಳ್ಳಾರಿ ಕಡೆಗಳಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್ಗೂ ಅಧಿಕ ದಾಖಲಾಗಿದೆ. ಕರಾವಳಿ ಭಾಗದಲ್ಲಿಯೂ ತಾಪಮಾನ 30 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪಿದೆ. ಆದರೆ ಈ ಎಲ್ಲದರ ನಡುವೆ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಇದನ್ನೂ ಓದಿ: ತರಕಾರಿಯಲ್ಲಿ ಪತ್ತೆಯಾಯ್ತು ವಿಷಕಾರಿ ಸೀಸದ ಅಂಶ : ಬೆಂಗಳೂರಿಗರೇ ಎಚ್ಚರ ಎಚ್ಚರ..!
ವಿಜಯಪುರ, ಗದಗ, ಕೊಪ್ಪಳ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನುಳಿದಂತೆ ಮಿಕ್ಯಾವ ಜಿಲ್ಲೆಗಳಲ್ಲಿ ಇಂದು ಮಳೆಯ ಸಂಭವ ಇರುವುದಿಲ್ಲ ಎನ್ನಲಾಗಿದೆ.



