ಜಾಗತಿಕ ಮಟ್ಟದಲ್ಲಿ ಪ್ರಧಾನಿ ಮೋದಿ ಹೊಸ ಇತಿಹಾಸ : ಇಸ್ರೇಲ್​ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ವಿಶ್ವ ಮೊದಲ ನಾಯಕ ಗರಿಮೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇಸ್ರೇಲ್​ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಇಸ್ರೇಲ್​ ಸಂಸತ್ತನ ಅತ್ಯುನ್ನತ ಗೌರವವಾದ ‘‘ ಸ್ಪೀಕರ್​ ಆಫ್​ ದಿ ನೆಸ್ಸೆಟ್​’ ಪದಕ ನೀಡಿ ಗೌರವಿಸಲಾಗಿದೆ. ಈ ಪದಕವನ್ನು ಪಡೆದ ವಿಶ್ವದ ಮೊದಲ ವ್ಯಕ್ತಿ ಎಂಬ ಗರಿಮೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ.

2017ರ ಬಳಿಕ ಇದೇ ಮೊದಲ ಬಾರಿಗೆ ಇಸ್ರೇಲ್​ಗೆ ತೆರಳಿದ ಪ್ರಧಾನಿ ಮೋದಿ ಅವರಿಗೆ ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವೈಯಕ್ತಿಕ ನಾಯಕತ್ವದ ಮೂಲಕ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಎಐಡಿಎಂಕೆಯಿಂದ ಭರ್ಜರಿ ಘೋಷಣೆ : ಪ್ರತಿ ಕುಟುಂಬಕ್ಕೆ 10,000 ರೂಪಾಯಿ

ಇಸ್ರೇಲ್​ ಸಂಸತ್ತಿನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಮಾತನಾಡಿದರು. ಇದೇ ವೇಳೆ ಭಾರತ ಹಾಗೂ ಇಸ್ರೇಲ್​ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ದು ಜಾಗತಿಕ ಶಾಂತಿ ನಿರ್ಮಿಸುವಲ್ಲಿ ಮುಖ್ಯಪಾತ್ರ ವಹಿಸಿದ ಪ್ರಧಾನಿ ಮೋದಿ ಅವರಿಗೆ ಇಸ್ರೇಲ್​ ಸಂಸತ್ತು ಗೌರವ ಅರ್ಪಿಸಿದೆ.

ಈ ಮೂಲಕ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ನಿಂದ ಅತ್ಯುನ್ನತ ಗೌರವ ಪಡೆದ ಜಾಗತಿಕ ನಾಯಕ ಎನಿಸಿದ್ದಾರೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories