ಶಿರಸಿ ಮಾರಿಕಾಂಬಾ ಜಾತ್ರೆಗೆ ಆಗಮಿಸುವ ಭಕ್ತರಿಗೆ ರೈಲ್ವೆ ಇಲಾಖೆಯಿಂದ ಸಿಹಿಸುದ್ದಿ
ಶಿರಸಿ : ಕರುನಾಡಿನ ಸುಪ್ರಸಿದ್ಧ ಜಾತ್ರೆಗಳ ಪೈಕಿ ಒಂದಾದ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆಗೆ ಜನಸಾಗರವೇ ಹರಿದುಬರುತ್ತದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಕೂಡ ಉಂಟಾಗುತ್ತಿದೆ . ಇದನ್ನು ಮನಗಂಡು ನೈಋತ್ಯ ರೈಲ್ವೆಯು ಭಕ್ತರ ಅನುಕೂಲಕ್ಕಾಗಿ 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಯಶವಂತಪುರದಿಂದ ತಾಳಗುಪ್ಪದವರೆಗೆ ಈ ವಿಶೇಷ ರೈಲು ಸೇವೆ ಲಭ್ಯವಿರಲಿದೆ.
ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ನಾಳೆಯಿಮದಲೇ ಸಂಚಾರ ಆರಂಭಿಸಲಿದೆ. ರೈಲು ಸಂಖ್ಯೆ 06587 ನಾಳೆ ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಶನಿವಾರ ಮುಂಜಾನೆ 05:05ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೆ ವಾಪಸ್ ಬೆಂಗಳೂರಿಗೆ ರೈಲು ಸಂಖ್ಯೆ 06588 ಶನಿವಾರ ಬೆಳಿಗ್ಗೆ 09:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 05:15ಕ್ಕೆ ಯಶವಂತಪುರ ತಲುಪಲಿದೆ.
ಮಾರ್ಚ್ ಒಂದರಿಂದ ರೈಲು ಸಂಖ್ಯೆ 16581 ಮಧ್ಯರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು ಬೆಳಿಗ್ಗೆ 9ಕ್ಕೆ ತಾಳಗುಪ್ಪ ತಲುಪಲಿದೆ. ಇನ್ನು ಅದೇ ದಿನ ಅಂದರೆ ಮಾರ್ಚ್ 1 ರಂದು ರೈಲು ಸಂಖ್ಯೆ 16582 ರಾತ್ರಿ 10ಕ್ಕೆ ತಾಳಗುಪ್ಪದಿಂದ ಹೊರಟು ಮರುದಿನ ಮುಂಜಾನೆ 04:45ಕ್ಕೆ ಯಶವಂತಪುರ ತಲುಪಲಿದೆ.
ಇದನ್ನೂ ಓದಿ: ವಂದೇ ಭಾರತ್ ರೈಲು ವಿವಾದ : ಮಂಗಳೂರಿಗರಿಗೆ ಭಾರೀ ನಿರಾಶೆ
ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲುಗಡೆ ಇರುವುದರಿಂದ ಈ ಭಾಗಗಳಿಂದ ಆಗಮಿಸುವ ಭಕ್ತಾದಿಗಳಿಗೂ ಅನುಕೂಲವಾಗಲಿದೆ. ಜಾತ್ರೆಗೆ ಆಗಮಿಸುವ ಭಕ್ತರ ಸಂಖ್ಯೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿಕೊಳ್ಳುವಂತೆ ರೈಲ್ವೆ ಇಲಾಖೆ ಸಲಹೆ ನೀಡಿದೆ.



