ಕರ್ನಾಟಕ ಬಜೆಟ್ 2026: ಶಿಕ್ಷಣ ಕ್ಷೇತ್ರಕ್ಕೆ ಬಂಪರ್ ಕೊಡುಗೆ! 15,000 ಶಿಕ್ಷಕರ ನೇಮಕ
ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ನೀಡಲಾಗುವುದು.
ಬೆಂಗಳೂರು: education sector highlights: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕ್ರಾಂತಿಕಾರಿ ವೇದಿಕೆ ಸಿದ್ಧಪಡಿಸಲಾಗಿದೆ. ಸರ್ಕಾರಿ ಶಾಲೆಗಳ ಬಲವರ್ಧನೆ, ಬೃಹತ್ ನೇಮಕಾತಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿನ ಪ್ರಮುಖ ಹೈಲೈಟ್ಸ್:
1. 15,000 ಬೋಧಕರ ಬೃಹತ್ ನೇಮಕಾತಿ:
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬರೋಬ್ಬರಿ 15,000 ಬೋಧಕ ಹುದ್ದೆಗಳನ್ನು 2026-27ನೇ ಸಾಲಿನಲ್ಲಿ ಭರ್ತಿ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಇದರೊಂದಿಗೆ ಉನ್ನತ ಶಿಕ್ಷಣ ಇಲಾಖೆಯಡಿ 2,000 ಬೋಧಕ ಹುದ್ದೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ 1,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
2. 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ:
ಮೊಬೈಲ್ ಬಳಕೆಯ ಅಡ್ಡಪರಿಣಾಮಗಳನ್ನು ತಡೆಗಟ್ಟಲು ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲು ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇದರೊಂದಿಗೆ ಮಾದಕ ವಸ್ತುಗಳ ಬಳಕೆಯ ವಿರುದ್ಧವೂ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರಲಿದೆ.
3. ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಉನ್ನತೀಕರಣ:
ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಘೋಷವಾಕ್ಯದಡಿ ಒಟ್ಟು 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚ ಮಾಡಲಾಗುವುದು.
4. ಉಚಿತ ಪಠ್ಯಪುಸ್ತಕ ಮತ್ತು ಡಿಜಿಟಲ್ ಟ್ಯೂಟರ್:
- ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ವಿದ್ಯಾರ್ಥಿಗಳವರೆಗೆ ಉಚಿತ ಪಠ್ಯಪುಸ್ತಕ ವಿತರಣೆ.
- IIT ಧಾರವಾಡ ಸಹಯೋಗದಲ್ಲಿ 12.28 ಲಕ್ಷ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಆಧಾರಿತ ಡಿಜಿಟಲ್ ಟ್ಯೂಟರ್ ಸೌಲಭ್ಯ.
5. ರೋಹಿತ್ ವೇಮುಲ ಕಾಯ್ದೆ ಜಾರಿ:
ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ ತಡೆಯಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಜೊತೆಗೆ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ.
Also Read: ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ !
6. ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಾತೃತ್ವ ರಜೆ:
ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ನೀಡಲಾಗುವುದು.
7. ಮೂಲಸೌಕರ್ಯಕ್ಕೆ ಕೋಟಿ ಕೋಟಿ ಅನುದಾನ:
ಶಾಲಾ ಕೊಠಡಿಗಳ ನಿರ್ಮಾಣಕ್ಕೆ 565 ಕೋಟಿ ರೂ., ಶೌಚಾಲಯಕ್ಕೆ 75 ಕೋಟಿ ರೂ. ಹಾಗೂ ಪೀಠೋಪಕರಣಗಳಿಗೆ 25 ಕೋಟಿ ರೂ. ಒದಗಿಸಲಾಗಿದೆ. ಬೆಂಗಳೂರು ಮತ್ತು ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲಾಗುವುದು.
karnataka budget 2026 education sector highlights kannada



