ಶಾಲಾ ಬಿಸಿಯೂಟಕ್ಕೆ ಯಾವುದೇ ತಡೆಯಿಲ್ಲದೆ ಎಲ್ಪಿಜಿ ಪೂರೈಕೆ: ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ಮಹತ್ವದ ಸೂಚನೆ
ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ವಹಿಸಲು ಶಾಲಾ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ‘ಪಿ.ಎಂ ಪೋಷಣ್’ (ಬಿಸಿಯೂಟ) ಯೋಜನೆಗೆ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ವಹಿಸಲು ಶಾಲಾ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಮಧ್ಯಪ್ರಾಚ್ಯ ಯುದ್ಧದ ಭೀತಿ ಮತ್ತು ಮುನ್ನೆಚ್ಚರಿಕೆ:
ಪ್ರಸ್ತುತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಮುಂಬರುವ ದಿನಗಳಲ್ಲಿ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ. ಇದನ್ನು ಮನಗಂಡು, ಶಾಲಾ ಮಕ್ಕಳ ಬಿಸಿಯೂಟ ಯೋಜನೆಗೆ ತೊಂದರೆಯಾಗದಂತೆ ಸರ್ಕಾರ ಈ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಆದೇಶದ ಪ್ರಮುಖಾಂಶಗಳು:
* ಆದ್ಯತೆಯ ಪೂರೈಕೆ: ಎಲ್ಪಿಜಿ ಸಿಲಿಂಡರ್ಗಳನ್ನು ‘ಅಗತ್ಯ ವಸ್ತುಗಳ ಕಾಯ್ದೆ’ ಅಡಿಯಲ್ಲಿ ಪರಿಗಣಿಸಿ, ಶಾಲೆಗಳಿಗೆ ಆದ್ಯತೆಯ ಮೇರೆಗೆ ಇಂಧನ ಪೂರೈಸಲು ತಮ್ಮ ವ್ಯಾಪ್ತಿಯ ಎಲ್ಲಾ ವಿತರಕರಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಯಾರಿ: ಪ್ರಸ್ತುತ ಶೈಕ್ಷಣಿಕ ವರ್ಷವು ಏಪ್ರಿಲ್ 10, 2026ಕ್ಕೆ ಮುಕ್ತಾಯಗೊಳ್ಳಲಿದ್ದು, ಅಲ್ಲಿಯವರೆಗೂ ಯಾವುದೇ ಅಡೆತಡೆಯಿಲ್ಲದೆ ಬಿಸಿಯೂಟ ಸಿದ್ಧಪಡಿಸಲು ಸಿಲಿಂಡರ್ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು.
* ನಿರಂತರ ಮೇಲ್ವಿಚಾರಣೆ: ಪಿ.ಎಂ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದಕ್ಕೆ ನಿರಂತರ ಇಂಧನ ಪೂರೈಕೆ ಅತ್ಯಗತ್ಯ ಎಂದು ಆದೇಶದಲ್ಲಿ ಒತ್ತಿಹೇಳಲಾಗಿದೆ.
ಇದನ್ನೂ ಓದಿ: ಗಲ್ಫ್ ಯುದ್ಧದಿಂದ ಭಾರತ ಕಲಿಯುತ್ತಿರುವ ಪಾಠಗಳೇನು? ಇಲ್ಲಿದೆ ರೋಚಕ ವಿವರ
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಪತ್ರ ಹೊರಡಿಸಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.



