ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್​ : ದೇಶದಲ್ಲಿ ಸಿಲಿಂಡರ್​ಗಳಿಗೆ ಭಾರೀ ಅಭಾವ

ಭಾರತದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ಏಕಾಏಕಿ 50 ಪರ್ಸೆಂಟ್​ ಕಡಿತವಾಗಿರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಭಾರತಕ್ಕೂ ತಟ್ಟಲು ಆರಂಭಿಸಿದೆ. ಸಿಲಿಂಡರ್​ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು ದೇಶಾದ್ಯಂತ ಹೋಟೆಲ್​ಗಳು, ದೇಗುಲಗಳು, ಪಿಜಿಗಳು ಮಾತ್ರವಲ್ಲದೇ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್​ಗಳಿಗೂ ಸಂಕಷ್ಟ ಎದುರಾಗಿದೆ.

ಹೋಟೆಲ್​ಗಳ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದ್ದರೆ, ಪಿಜಿಗಳಲ್ಲಿ ವಾಸಿಸುವವರಿಗೆ ಊಟದ ವ್ಯವಸ್ಥೆಯನ್ನೇ ಸ್ಥಗಿತಗೊಳಿಸಲಾಗಿದೆ. ಕೆಲ ಇಂದಿರಾ ಕ್ಯಾಂಟೀನ್​ಗಳಲ್ಲಿಯೂ ಮಧ್ಯಾಹ್ನದ ಊಟಕ್ಕೆ ಕೊಕ್​ ನೀಡಲಾಗಿದೆ. ಪ್ರಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಇದರ ಎಫೆಕ್ಟ್​ ತಟ್ಟಿದ್ದು ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಿಸಲು ಕಟ್ಟಿಗೆಯ ಒಲೆಯ ಮೊರೆ ಹೋಗಲಾಗುತ್ತಿದೆ.

ಇದನ್ನೂ ಓದಿ: ಶಾಲಾ ಬಿಸಿಯೂಟಕ್ಕೆ ಯಾವುದೇ ತಡೆಯಿಲ್ಲದೆ ಎಲ್‌ಪಿಜಿ ಪೂರೈಕೆ: ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ಮಹತ್ವದ ಸೂಚನೆ

 

ಭಾರತದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ಏಕಾಏಕಿ 50 ಪರ್ಸೆಂಟ್​ ಕಡಿತವಾಗಿರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣ ಎನ್ನಲಾಗಿದೆ. ಇನ್ನು ಶಾಲಾ – ಕಾಲೇಜುಗಳು, ಆಸ್ಪತ್ರೆಗಳು ಹಾಗೂ ಹಾಸ್ಟೇಲ್​ಗಳನ್ನು ಆದ್ಯತೆಯಾಗಿಸಿ ಸಿಲಿಂಡರ್ ಪೂರೈಸುವಂತೆ ಸರ್ಕಾರ ಸೂಚನೆ ನೀಡಿದೆ. ಇದೇ ವಿಚಾರವಾಗಿ ಸಚಿವ ಕೆ.ಎಚ್​ ಮುನಿಯಪ್ಪ ಮಾತನಾಡಿದ್ದು, ಒಂದು ಕುಟುಂಬಕ್ಕೆ ಒಂದು ಸಿಲಿಂಡರ್ ಪೂರೈಸುವ ಪ್ರಯತ್ನ ಮಾಡುತ್ತಿದ್ದೇವೆ. ದೇಶ ಸಂಕಷ್ಟದ ಸಂದರ್ಭದಲ್ಲಿ ಇರುವಾಗ ಜನತೆ ಕೂಡ ಸಹಕರಿಸಬೇಕು ಎಂದಿದ್ದಾರೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories