ಐಟಿಐ ಮಾಡಿದವರಿಗೆ ಗುಡ್‌ನ್ಯೂಸ್: ಸೌತ್ ಸೆಂಟ್ರಲ್ ರೈಲ್ವೆಯ 2,801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಸೌತ್ ಸೆಂಟ್ರಲ್ ರೈಲ್ವೆ (SCR) ಅಪ್ರೆಂಟಿಸ್ ಹುದ್ದೆ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಏಪ್ರಿಲ್ 11, 2026 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.
South Central Railway Recruitment 2026: ರೈಲ್ವೆ ಇಲಾಖೆಯಲ್ಲಿ ಕೆಲಸಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಸುವರ್ಣಾವಕಾಶ. ಸೌತ್ ಸೆಂಟ್ರಲ್ ರೈಲ್ವೆ (SCR) ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇದರ ಪ್ರಕಾರ ಸೌತ್ ಸೆಂಟ್ರಲ್ ರೈಲ್ವೆ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಮಾಡಿಕೊಳ್ಳಲಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 11, 2026 ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಗತ್ಯ ಅರ್ಹತೆಗಳೇನು? ಇಲ್ಲಿದೆ ಓದಿ.
ಹುದ್ದೆಯ ವಿವರ
ಹುದ್ದೆಯ ಹೆಸರು : ಅಪ್ರೆಂಟಿಸ್‌ಶಿಪ್ ಹುದ್ದೆ
ಒಟ್ಟು ಹುದ್ದೆಗಳು : 2,801 ಹುದ್ದೆಗಳು
ವಿದ್ಯಾರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ 10+2 ಮಾದರಿಯಲ್ಲಿ ಕನಿಷ್ಠ 50% ಪಡೆಗಳೊಂದಿಗೆ ಉತ್ತೀರ್ಣರಾಗಿರಬೇಕು. ಜೊತೆಗೆ ಮಾನ್ಯತೆ ಪಡೆದ ಐಟಿಐನಿಂದ ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ
ಸೌತ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 15 ರಿಂದ 24 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಆಯ್ಕೆ ಪ್ರಕ್ರಿಯೆ
ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
ಇದನ್ನೂ ಓದಿ: 5 ಗಂಟೆ ಕೆಲಸ ಮಾಡಿ 1,000 ಗಳಿಸಿ! ಪಾರ್ಟ್ ಟೈಮ್ ಕೆಲಸದಲ್ಲಿ ಭರ್ಜರಿ ದುಡಿಮೆ, ಕನ್ನಡ ಕಟ್ಟುವ ಸಾಹಸ
ಅರ್ಜಿ ಶುಲ್ಕ
ಸೌತ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಮಹಿಳೆ/ಟ್ರಾನ್ಸ್‌ಜೆಂಡರ್/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಅರ್ಜಿಯನ್ನು ಸೌತ್ ಸೆಂಟ್ರಲ್ ರೈಲ್ವೆಯ ಅಧಿಕೃತ ವೆಬ್‌ಸೈಟ್ scr.indianrailways.gov.in ಗೆ ಭೇಟಿ ನೀಡಿ ಸಲ್ಲಿಸಬಹುದು.



