ಕಾರ್ಕಳ : ಸೇತುವೆಗಳ ನಿರ್ಮಾಣಕ್ಕೆ 4.50 ಕೋಟಿ ಬಿಡುಗಡೆ : ವಿ.ಸುನಿಲ್‌ ಕುಮಾರ್‌

ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾರ್ಕಳ - ನಕ್ರೆ- ರಂಗನಪಲ್ಕೆ ಜಿಲ್ಲಾ ಮುಖ್ಯ ರಸ್ತೆಯ ಪರಪು ಎಂಬಲ್ಲಿನ ಸೇತುವೆ ಮರು ನಿರ್ಮಾಣಕ್ಕೆ ಹಲವು ವರ್ಷಗಳಿಂದಲೂ ಬೇಡಿಕೆ ಕೇಳಿಬರುತ್ತದೆ.

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳಲ್ಲಿ ಹಾದು ಹೋಗುವ 3 ಸೇತುವೆಗಳ ಮರು ನಿರ್ಮಾಣದ ಕಾಮಗಾರಿಗೆ ಬರೋಬ್ಬರಿ 4.50 ಕೋಟಿ ರೂಪಾಯಿ ಅನುದಾನ ಮಂಜೂರಾತಿಗಾಗಿ ಸರಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಕಾರ್ಕಳ ಶಾಸಕರಾದ ವಿ.ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾರ್ಕಳ – ನಕ್ರೆ- ರಂಗನಪಲ್ಕೆ ಜಿಲ್ಲಾ ಮುಖ್ಯ ರಸ್ತೆಯ ಪರಪು ಎಂಬಲ್ಲಿನ ಸೇತುವೆ ಮರು ನಿರ್ಮಾಣಕ್ಕೆ ಹಲವು ವರ್ಷಗಳಿಂದಲೂ ಬೇಡಿಕೆ ಕೇಳಿಬರುತ್ತದೆ. ಜನರ ಹಲವು ವರ್ಷದ ಬೇಡಿಕೆ ಈಡೇರುತ್ತಿದೆ.

Also Read : ಉಡುಪಿ: ಸಂತೆಕಟ್ಟೆಯಲ್ಲಿ ಕಾರು-ಎಕ್ಸ್‌ಪ್ರೆಸ್ ಬಸ್ ನಡುವೆ ಭೀಕರ ಅಪಘಾತ; ನಜ್ಜುಗುಜ್ಜಾದ ಕಾರು, ಹಲವರು ಗಂಭೀರ

ಇನ್ನು ರೇಂಜಾಳ- ನೆಲ್ಲಿಕಾರು ಜಿಲ್ಲಾ ಮುಖ್ಯ ರಸ್ತೆಯ ರೆಂಜಾಳ ಗ್ರಾಮ ಪಂಚಾಯತ್‌ ಬಳಿಯ ಸೇತುವೆ ಹಾಗೂ ಬೋಳ ಗ್ರಾಮದ ಶ್ರೀ ಮೃತ್ಯುಂಜಯ ಸ್ವಾಮಿ ದೇವಸ್ಥಾನದ ಸಮೀಪದ ಸೇತುವೆ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನಕ್ಕೆ ಮಂಜೂರಾತಿ ದೊರೆತಿದೆ.

ಕಾರ್ಕಳ ವಿಧಾನಸಭಾ ಕ್ಷೇಥ್ರ ವ್ಯಾಪ್ತಿಯಲ್ಲಿ ಒಟ್ಟು 4.50 ಕೋಟಿ ರೂಪಾಯಿ ಅನುದಾನಗಳನ್ನು ಸೇತುವೆಯ ಮರು ನಿರ್ಮಾಣ ಕಾರ್ಯಕ್ಕೆ ವಿನಿಯೋಗ ಮಾಡಲು ಅನುಮೋದನೆ ದೊರೆತಿದೆ. ಆಡಳಿತಾತ್ಮಕ ಅನುಮೋದನೆಯ ಬಳಿಕ ಸೇತುವೆ ನಿರ್ಮಾಣದ ಕಾರ್ಯ ಆರಂಭಗೊಳ್ಳಲಿದೆ ಎಂದು ಶಾಸಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read : ಕೋಟ: ಸಿಸಿ ಕ್ಯಾಮೆರಾ ಕಿರಿಕ್; ವೃದ್ಧೆಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ, 7 ಮಂದಿಯ ವಿರುದ್ಧ ಎಫ್‌ಐಆರ್

karkalla mla sunil kumar sanctions 4 50 crore for bridge construction

 

 

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories