ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ : ಕಂದಾಯ ಇಲಾಖೆಯ ಅಧಿಕಾರಿಗಳಿಗಿಲ್ಲ ಯುಗಾದಿ ರಜೆ

ಕರ್ನಾಟಕ ವಿಧಾನಸಭೆ ಅಧಿವೇಶನದ ಬಾಕಿ ಪ್ರಶ್ನೆಗಳಿಗೆ ಉತ್ತರ ನೀಡುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಯುಗಾದಿ ಹಬ್ಬದ ರಜೆಯನ್ನು ಕಡಿತಗೊಳಿಸಲಾಗಿದೆ.

ಇಂದು ಚಾಂದ್ರಮಾನ ಯುಗಾದಿ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ. ಆದರೆ ಕರ್ನಾಟಕ ವಿಧಾನಸಭೆ ಅಧಿವೇಶನದ ಬಾಕಿ ಪ್ರಶ್ನೆಗಳಿಗೆ ಉತ್ತರ ನೀಡುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಯುಗಾದಿ ಹಬ್ಬದ ರಜೆಯನ್ನು ಕಡಿತಗೊಳಿಸಲಾಗಿದ್ದು ಕಡ್ಡಾಯವಾಗಿ ಹಾಜರಿರುವಂತೆ ಇಲಾಖಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್​ ಕಟಾರಿಯಾ ಸೂಚನೆ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಮಾರ್ಚ್ 23ರಂದು ಕಂದಾಯ ಇಲಾಖೆಗೆ ಸಂಬಂಧಿಸಿದ ಬಾಕಿ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಇವರ ಸೂಚನೆ ಮೇರೆಗೆ ಮುಜರಾಯಿ, ಭೂ ಮಂಜೂರಾತಿ-1, ಭೂ ಮಂಜೂರಾತಿ-2, ಭೂ ಮಂಜೂರಾತಿ-3, ಸೇವೆಗಳು-3, ಭೂ ಕಂದಾಯ, ಭೂ ಮಾಪನ, ಭೂಮಿ, ಭೂಸುಧಾರಣಾ ಕೋಶ ಒಟ್ಟು 9 ಶಾಖೆಗಳಿಗೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಮಾರ್ಚ್​​ 19ರಂದು ಕಡ್ಡಾಯವಾಗಿ ಕಚೇರಿಗೆ ಹಾಜರಾಗಿ ವಿಧಾನ ಸಭೆ ಬಾಕಿಯಿರುವ ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ.

ಈ ವಿಚಾರವಾಗಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಸುರೇಶ್​ ಕುಮಾರ್​ ಪ್ರತಿಕ್ರಿಯಿಸಿದ್ದು, ಯುಗಾದಿ ಸಂಪೂರ್ಣ ಹಿಂದೂಗಳು ಆಚರಿಸುವ ಪ್ರಮುಖ ಹಬ್ಬ. ನಮ್ಮ ಹೊಸ ವರ್ಷ ಆರಂಭದ ಸಂಭ್ರಮದ ದಿನ. ಆದರೆ ಈ ದಿನದಂದೇ ಸಭೆಗೆ ಹಾಜರಾಗುವಂತೆ ಸೂಚನೆ ನೀಡಿದ್ದು ಏಕೆ ? ಶುಕ್ರವಾರ ಇಲ್ಲವೇ ಶನಿವಾರ ಸಭೆ ಕರೆಯಬಹುದಿತ್ತಲ್ಲವೇ ? ರಂಜಾನ್​ ದಿನ ಸಭೆ ಕರೆದರೆ ಜಾತ್ಯಾತೀತ ಸರ್ಕಾರ ಎಂದು ಕರೆಯಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಅವರು ವ್ಯಂಗ್ಯವಾಡಿದರು.

ಇದನ್ನೂ ಓದಿ: ಉಪ‌‌ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಶಾಸಕರ ಪ್ರಶ್ನೆಗಳಿಗೆ ಸದನದಲ್ಲಿ ಸೂಕ್ತ ಉತ್ತರ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಸ್ಪೀಕರ್​ ಯು.ಟಿ ಖಾದರ್​ ಸಭಾತ್ಯಾಗವನ್ನೇ ಮಾಡಿದ್ದರು. ಇದಾದ ಬಳಿಕ ಸಿಎಂ ಸಿದ್ದರಾಮಯ್ಯ 9 ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್​ ನೀಡಿದ್ದರು. ಇದೀಗ ಕಂದಾಯ ಇಲಾಖೆಯ ಸಿಬ್ಬಂದಿ ಯುಗಾದಿ ಹಬ್ಬದ ರಜೆಯ ತಲೆದಂಡ ನೀಡಬೇಕಾಗಿ ಬಂದಿದೆ

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories